ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಈ ದುರಂತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಡ್ಯದ ಕಾರು ಚಾಲಕ ಗೋವಿಂದರಾಜು, ಅಶೋಕ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





