Mysore
34
few clouds

Social Media

ಬುಧವಾರ, 25 ಮಾರ್ಚ್ 2026
Light
Dark

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೇಲಮಂಗಲ ಗೇಟ್ ಬಳಿ ನಡೆದಿದೆ.

ಬೆಂಗಳೂರು ಮೂಲದ ಮೊಬಿನಾ(20) ಹಾಗೂ ಶ್ಯಾಂ (22) ಮೃತರು. ತಾಯಿ ಶೀಲಶ್ರೀ, ಸಂಬಂಧಿ ಹೀನಾಶ್ರೀ ಹಾಗೂ ಕಾರು ಚಾಲಕ ನಿಚೇತನ್‌ಗೆ ಗಂಭೀರ ಗಾಯಗಳಾಗಿವೆ.

ರಾಷ್ಟ್ರೀಯ ಹೆದ್ದಾರಿ 150ರಲ್ಲಿ ದುರ್ಘಟನೆ ನಡೆದಿದೆ. ಮೂವರು ಗಾಯಾಗಳುಗಳ ಸ್ಥಿತಿ ಚಿಂತಾಜಕ ಎನ್ನಲಾಗಿದೆ. ಬೆಳ್ಳೂರಿನ ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:
error: Content is protected !!