ಮಂಡ್ಯ

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ ಬರ ಪರಿಶೀಲನೆ ನಡೆಸಿದರು.

ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯ ಡಾ. ನವೀನ್ ಕುಮಾರ್ ಜೈನ್ ನೇತೃತ್ವದ ಅಧಿಕಾರಿಗಳ ತಂಡವು ಮೊದಲಿಗೆ ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಭೇಟಿ ನೀಡಿ ಜಲಾಶಯದ ಒಳಹರಿವು ಹಾಗೂ ಹೊರಹರಿವಿನ ಪ್ರಮಾಣದ ಬಗ್ಗೆಯೂ ಪರಿಶೀಲನೆ ನಡೆಸಿತು. ಬಳಿಕ ಕೆಆರ್‌ಎಸ್‌ ಜಲಾಶಯದ ಪ್ರಸ್ತುತ ನೀರಿನ ಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಮಂಡ್ಯ ಜಿಲ್ಲೆಯ ಬರಪೀಡಿತ ಹಳ್ಳಿಗಳಿಗೂ ಭೇಟಿ ನೀಡಿದ ಅಧಿಕಾರಿಗಳ ತಂಡ ಬರದಿಂದ ಉಂಟಾಗಿರುವ ಪರಿಸ್ಥಿತಿ, ರೈತರ ಸಮಸ್ಯೆಗಳು ಹಾಗೂ ಬೆಳೆ ನಷ್ಟದ ಕುರಿತು ಪರಿಶೀಲನೆ ನಡೆಸಿತು.

ಇನ್ನು ಮಂಡ್ಯ ಜಿಲ್ಲೆಯ ಬರ ಪರಿಸ್ಥಿತಿಯ ಸಮಗ್ರ ಅಧ್ಯಯನ ನಡೆಸಲಿರುವ ಅಧಿಕಾರಿಗಳ ತಂಡ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆಯಿದೆ.

 

ಆಂದೋಲನ ಡೆಸ್ಕ್

Recent Posts

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

12 mins ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

5 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

5 hours ago