ಮಂಡ್ಯ

ಮಂಡ್ಯ: ಫಲಪುಷ್ಪ ಪ್ರದರ್ಶನಕ್ಕೆ ವಿಧ್ಯುಕ್ತ ಚಾಲನೆ

ಮಂಡ್ಯ : ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಜವಳಿ ಇಲಾಖೆ ವತಿಯಿಂದ ಆಯೋಜಿಸಿರುವ ʻಮಧುರ ವಸ್ತ್ರೋತ್ಸವʻವನ್ನು ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೆಪ್‌ ಕಟ್‌ ಮಾಡುವ ಮೂಲಕ ಶುಕ್ರವಾರ ವಿಧ್ಯಕ್ತ ಚಾಲನೆ ನೀಡಿದರು.

ಉದ್ಯಾನವನದಲ್ಲಿ ಆಕರ್ಷಕ ಬಣ್ಣದ ನಾನಾ ಜಾತಿಯ ಪುಷ್ಪಗಳು ಅರಳಿ ನಿಂತಿದ್ದು, ಗಣ್ಯರನ್ನು ಸ್ವಾಗತಿ ಕೋರುತ್ತಿದ್ದವು. ಮಧುರ ವಸ್ತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚರಕ ಹಾಗೂ ಕೈಮಗ್ಗ ನೋಡಿ ಸಚಿವರು ಪುಳಕಿತರಾದರು.

9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ಗುಲಾಬಿ ಹೂವುಗಳಿಂದ ಪ್ರವಾಸಿ ತಾಣ, ದೇವಾಲಯಗಳ ನಿರ್ಮಾಣವಾಗಿದ್ದು, ಮೊದಲ ದಿನವಾದ ಶುಕ್ರವಾರ ಅಪರಾ ಜನರು ಪುಷ್ಪವನವನ್ನು ಕಣ್ತುಂಬಿಕೊಂಡರು.

ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಹಾಗೂ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳ ಸಮಗ್ರ ಮಾಹಿತಿ ಇಲ್ಲಿ ದೊರೆಯಲಿದೆ.

ಪ್ರತಿ ದಿನ ಬೆಳಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ  ಅವಕಾಶ

ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30, 6-12 ವರ್ಷದ ಮಕ್ಕಳಿಗೆ 20 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳ ಗುಂಪುಗಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತವಾಗಿದೆ.

ಪ್ರಮುಖ ಆಕರ್ಷಣೆಳಿವು

ಫಲಪುಷ್ಪ ಪ್ರದರ್ಶನದಲ್ಲಿ 9ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ವಿವಿಧ ಬಣ್ಣದ ಗುಲಾಬಿ ಹೂವುಗಳನ್ನು ಬಳಸಿ ಪ್ರಸಿದ್ದ ದೇವಾಲಯ ಹಾಗೂ ಪ್ರಸಿದ್ದ ಪ್ರವಾಸಿ ತಾಣಗಳನ್ನು ನಿರ್ಮಿಸಲಾಗಿದೆ.

ಜಿಲ್ಲೆಯ ಪ್ರಸಿದ್ದ ದೇವಾಲಯವಾದ ಮೇಲುಕೋಟೆಯ ಯೋಗನರಸಿಂಹ ಸ್ವಾಮಿ ದೇವಾಲಯ. ಕರ್ನಾಟಕ ಪ್ರಸಿದ್ಧ ಪ್ರವಾಸಿ ತಾಣವಾದ ರಂಗನತಿಟ್ಟು. ಹಳ್ಳಿ ಸೊಗಡಿನ ರೈತನ ಮನೆ, ಏಳು ಬೆಟ್ಟದ ಒಡೆಯ ಮಲೆ ಮಹದೇಶ್ವರ ದೇವಾಲಯಗಳು ಫಲಪುಷ್ಪ ಪ್ರದರ್ಶನ ಆಕರ್ಷಣೆಗಳಾಗಿವೆ.

ಯುವ ಜನತೆಯನ್ನು ಸೆಳೆಯಲು ಹತ್ತು ವಿವಿಧ ಕಡೆಗಳಲ್ಲಿ ಸೆಲ್ಫಿ ಪಾಯಿಂಟ್, ಹೂವಿನ ಆಕೃತಿಯ ಕ್ಷಯ ರೋಗ ಕುರಿತು ಜಾಗೃತಿ, ನರೇಗಾ ಯೋಜನೆಯ ಮಾಹಿತಿಯೊನ್ನೊಳಗೊಂಡ ಸ್ಥಬ್ಥ ಚಿತ್ರ, ವಿವಿಧ ಆಕರ್ಷಕ ಬಗೆಯ ಅಡಿನಿಯಂ ಗಿಡಗಳ ಪ್ರದರ್ಶಿಕೆ, ಬೋನ್ಸಾಯ್ ಗಿಡಗಳ ಪ್ರದರ್ಶಿಕೆ, ವಿವಿಧ ತರಕಾರಿ ಹಣ್ಣುಗಳನ್ನು ಬಳಸಿ ಕಲಾಕೃತಿಗಳ ಕೆತ್ತನೆ ಹಾಗೂ ಇಕೆಬನಾ ಜೋಡಣೆ ಎಲ್ಲರನ್ನೂ ಆಕರ್ಷಿಸಲಿವೆ.

ವಿಶೇಷ ಆಕರ್ಷಣೆಗಳಿವು

35 ಸಾವಿರಕ್ಕೂ ಹೆಚ್ಚು 40 ಬಗೆಯ ವಿವಿಧ ಜಾತಿಯ ಹೂವುಗಳ ಅಲಂಕಾರಿಕ ಕುಂಡಗಳ ಜೋಡಣೆ, 1.50 ಲಕ್ಷ ವಿವಿಧ ಜಾತಿಯ ಅಲಂಕಾರಿಕ ಗಿಡಗಳಾದ ಪೆಟೊನಿಯಾ, ಸಾಲ್ವಿಯಾ, ಅಂಟಿರೈನಂ, ಸೆಲೋಶಿಯಾ, ಮಾರಿಗೋಲ್ಡ್, ಜೀನಿಯಾ, ಸೇವಂತಿಗೆ, ಪಾಯ್ನಿಸೆಟಿಯಾಗಳು.

ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಜಿಲ್ಲೆಗಳ ಕೈಮಗ್ಗ, ನೇಕಾರರ ಸಹಕಾರ ಸಂಘಗಳು ಭಾಗವಹಿಸಿವೆ. ಕೈ ಮಗ್ಗ ನೇಕಾರರಿಂದ ತಯಾರಿಸಿರುವ ಹತ್ತಿ, ರೇಷ್ಮೆ, ಮೊಳಕಾಲ್ಮೂರು ರೇಷ್ಮೆ ಸೀರೆ, ಚಿಂತಾಮಣಿ ರೇಷ್ಮೆ ಸೀರೆ, ಕಾಟನ್ ಸೀರೆ, ಪಂಚೆ, ಬೆಡ್‌ಶೀಟ್, ಟವಲ್, ಲುಂಗಿ ಹಾಗೂ ಇತರೆ ಕೈ ಮಗ್ಗ ಉತ್ಪನ್ನಗಳನ್ನು ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನೆ ಇಲಾಖೆ, ಆರೋಗ್ಯ ಇಲಾಖೆ, ಕೈಗಾರಿಕೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ವತಿಯಿಂದ ಕಲಾಕೃತಿಗಳನ್ನು ಹಾಗೂ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಗುತ್ತಿದೆ.

ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ್, ಸಿಇಒ ಶೇಖ್ ತನ್ವೀರ್ ಅಸಿಫ್,ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ನಗರ ಸಭೆಯ ಅಧ್ಯಕ್ಷ ನಾಗೇಶ್, ತೋಟಗಾರಿಕೆ ಇಲಾಖೆ ಡಿಡಿ ರೂಪ, ಕೈಮಗ್ಗ ಇಲಾಖೆ ಡಿಡಿ ರಂಗಸ್ವಾಮಿ ಸೇರಿದಂತೆ ಇತರರು ಹಾಜರಿದ್ದರೂ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

38 mins ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

59 mins ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

1 hour ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

1 hour ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

3 hours ago