Mysore
26
overcast clouds

Social Media

ಮಂಗಳವಾರ, 21 ಜುಲೈ 2026
Light
Dark

ಮಂಡ್ಯ | ಸೆಸ್ಕಾಂ ಎಇ ಲೋಕಾ ಬಲೆಗೆ

ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಸೆಸ್ಕಾಂನ ಶ್ರೀನಿವಾಸ್ ಲೋಕಾ ಬಲೆಗೆ ಬಿದ್ದ ಸಹಾಯಕ ಎಂಜಿನಿಯರ್. ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 75 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಪೂರಕವೆಂಬಂತೆ 30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಶ್ರೀನಿವಾಸ್‌ನನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ.

ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು. ಬಲೆಗೆ ಬಿದ್ದ ಎಇ ಶ್ರೀನಿವಾಸ್ ಅವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

Tags:
error: Content is protected !!