ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಡ್ಯ ಎಸ್ಪಿ ಶೋಭಾರಾಣಿ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದ ಶಾಂತಿನಗರದ ಸದ್ದಾಂ ಹುಸೇನ್ ಹಾಗೂ ಮೈಸೂರಿನ ರಾಜೀವ್ ನಗರದ ಸೈಯಾದ್ ಆಯೂಬ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಂದ ಒಟ್ಟು 253 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ 178 ಗ್ರಾಂ ಬೆಳ್ಳಿಯ ಒಡವೆಗಳು, ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಪಲ್ಸರ್ ಬೈಕ್ ಹಾಗೂ ಆಕ್ಸಿಸ್ ಬೈಕನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.





