Mysore
14
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮಂಡ್ಯ| ಕಾರುಗಳ ನಡುವೆ ಡಿಕ್ಕಿ: ಇಬ್ಬರು ಸಾವು

ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ನಡೆದಿದೆ.

ಹೊಸ ವರ್ಷದ ಮೊದಲ ದಿನವಾದ ಸೋಮವಾರ ಮುಂಜಾನೆ ೩ರ ಸಮಯದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಹಾಗೂ ಗರುಡನ ಉಕ್ಕಡ ಗ್ರಾಮಗಳ ನಡುವಿನ ಬೆಂಗಳೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ೧೦ ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರು ಸಪ್ತಗಿರಿ ಮೆಡಿಕಲ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನಿ ಮಾಯಿಸಿಂಗ್ (೧೯), ಬೆಂಗಳೂರಿನ ಖಾಸಗಿ ಕಾಲೇಜು ಬಿ.ಇ. ವಿದ್ಯಾರ್ಥಿ ಅರುಣವ್ (೧೯) ಸ್ಥಳದಲ್ಲಿಯೇ ಮತಪಟ್ಟವರು. ಅದಷ್ಟವಶಾತ್ ಕಾರಿನ ಏರ್‌ಬ್ಯಾಗ್ ತೆರೆದುಕೊಂಡಿದ್ದರಿಂದ ಅದೇ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ೪ ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ೬ ಮಂದಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲ ಗಾಯಾಳುಗಳನ್ನು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನೂತನ ವರ್ಷಾಚರಣೆ ಮಾಡಿಕೊಂಡು ಮಾಯಿಸಿಂಗ್, ಅರುಣವ್ ಹಾಗೂ ಇತರೆ ನಾಲ್ಕು ಮಂದಿ ಸ್ನೇಹಿತರು ಕಿಯಾ ಕಾರಿನಲ್ಲಿ, ಮತ್ತೊಂದು ಕಾರಿನಲ್ಲಿ ಕೋಲಾರ ಮೂಲದ ವಿದ್ಯಾರ್ಥಿಗಳು ಮೈಸೂರು ಕಡೆಗೆ ತೆರಳುತ್ತಿದ್ದರು.

ಕೋಲಾರ ಮೂಲದ ವಿದ್ಯಾರ್ಥಿಗಳಿದ್ದ ಕಾರು ಸರ್ವಿಸ್ ರಸ್ತೆಯಿಂದ ಎಕ್ಸ್ಪ್ರೆಸ್ ಹೈವೆಗೆ ಎಂಟ್ರಿಯಾದಾಗ ಪಿಯೆಟ್ ಕಾರಿನ ವೇಗದಲ್ಲಿ ಸ್ವಲ್ಪ ನಿಧಾನವಾಗಿದೆ. ಎಕ್ಸ್ಪ್ರೆಸ್ ಹೈವೆಯಲ್ಲಿ ವೇಗವಾಗಿ ಬಂದ ಕಿಯಾ ಕಾರು ವೇಗ ನಿಯಂತ್ರಣ ಮಾಡಲು ಸಾಧ್ಯವಾಗದೆ ಮುಂಬದಿ ಚಲಿಸುತ್ತಿದ್ದ ಪಿಯೆಟ್ ಕಾರಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆಯಿಂದಾಗಿ ಕಾರು ನಜ್ಜುಗುಜ್ಜಾಗಿ ಮಾಯಿಸಿಂಗ್ ಹಾಗೂ ಅರುಣವ್ ಮೃತಪಟ್ಟಿದ್ದಾರೆ ಎಂದು ವೃತ್ತ ನಿರೀಕ್ಷಕ ಬಿ.ಜಿ.ಕುಮಾರ್ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!