ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.
ಹೊಸ ವರ್ಷದ ಮೊದಲ ದಿನವಾದ ಸೋಮವಾರ ಮುಂಜಾನೆ ೩ರ ಸಮಯದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಹಾಗೂ ಗರುಡನ ಉಕ್ಕಡ ಗ್ರಾಮಗಳ ನಡುವಿನ ಬೆಂಗಳೂರು ಎಕ್ಸ್‌ಪ್ರೆಸ್ ವೇ ನಲ್ಲಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ೧೦ ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರು ಸಪ್ತಗಿರಿ ಮೆಡಿಕಲ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನಿ ಮಾಯಿಸಿಂಗ್ (೧೯), ಬೆಂಗಳೂರಿನ ಖಾಸಗಿ ಕಾಲೇಜು ಬಿ.ಇ. ವಿದ್ಯಾರ್ಥಿ ಅರುಣವ್ (೧೯) ಸ್ಥಳದಲ್ಲಿಯೇ ಮತಪಟ್ಟವರು. ಅದಷ್ಟವಶಾತ್ ಕಾರಿನ ಏರ್‌ಬ್ಯಾಗ್ ತೆರೆದುಕೊಂಡಿದ್ದರಿಂದ ಅದೇ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ೪ ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ೬ ಮಂದಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲ ಗಾಯಾಳುಗಳನ್ನು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನೂತನ ವರ್ಷಾಚರಣೆ ಮಾಡಿಕೊಂಡು ಮಾಯಿಸಿಂಗ್, ಅರುಣವ್ ಹಾಗೂ ಇತರೆ ನಾಲ್ಕು ಮಂದಿ ಸ್ನೇಹಿತರು ಕಿಯಾ ಕಾರಿನಲ್ಲಿ, ಮತ್ತೊಂದು ಕಾರಿನಲ್ಲಿ ಕೋಲಾರ ಮೂಲದ ವಿದ್ಯಾರ್ಥಿಗಳು ಮೈಸೂರು ಕಡೆಗೆ ತೆರಳುತ್ತಿದ್ದರು.
ಕೋಲಾರ ಮೂಲದ ವಿದ್ಯಾರ್ಥಿಗಳಿದ್ದ ಕಾರು ಸರ್ವಿಸ್ ರಸ್ತೆಯಿಂದ ಎಕ್ಸ್ಪ್ರೆಸ್ ಹೈವೆಗೆ ಎಂಟ್ರಿಯಾದಾಗ ಪಿಯೆಟ್ ಕಾರಿನ ವೇಗದಲ್ಲಿ ಸ್ವಲ್ಪ ನಿಧಾನವಾಗಿದೆ. ಎಕ್ಸ್ಪ್ರೆಸ್ ಹೈವೆಯಲ್ಲಿ ವೇಗವಾಗಿ ಬಂದ ಕಿಯಾ ಕಾರು ವೇಗ ನಿಯಂತ್ರಣ ಮಾಡಲು ಸಾಧ್ಯವಾಗದೆ ಮುಂಬದಿ ಚಲಿಸುತ್ತಿದ್ದ ಪಿಯೆಟ್ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಘಟನೆಯಿಂದಾಗಿ ಕಾರು ನಜ್ಜುಗುಜ್ಜಾಗಿ ಮಾಯಿಸಿಂಗ್ ಹಾಗೂ ಅರುಣವ್ ಮೃತಪಟ್ಟಿದ್ದಾರೆ ಎಂದು ವೃತ್ತ ನಿರೀಕ್ಷಕ ಬಿ.ಜಿ.ಕುಮಾರ್ ತಿಳಿಸಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…