ಮಂಡ್ಯ: ಟಿಪ್ಪರ್ ಹಾಗು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಬಳಿ ನಡೆದಿದೆ.
ಹುಣಸೂರು ಮೂಲದ ಚಂದ್ರಶೇಖರ್ ಮೃತ ದುರ್ದೈವಿಯಾಗಿದ್ದಾನೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಹುಣಸೂರು ಕಡೆಗೆ ಹೋಗುತ್ತಿದ್ದ ಕಾರು ಶ್ರೀರಂಗಪಟ್ಟಣ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿತ್ತು. ತಕ್ಷಣ ಕಾರು ಹೊತ್ತಿ ಉರಿದಿದ್ದು, ಚಾಲಕ ಸಾವನ್ನಪ್ಪಿದ್ದಾನೆ.
ಚಂದ್ರಶೇಖರ್ ಮೃತದೇಹವನ್ನು ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:-6 ವರ್ಷಗಳ ನಂತರ ಡೊನಾಲ್ಡ್ ಟ್ರಂಪ್- ಕ್ಸಿ ಜಿನ್‌ಪಿಂಗ್ ಭೇಟಿ
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…