Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಮಂಡ್ಯ ಸಮ್ಮೇಳನ | ʻಸಿರಿಧಾನ್ಯ ನಡಿಗೆʼ ಉದ್ಟಾಟನೆ

ಮಂಡ್ಯ:87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಉದ್ಟಾಟಿಸಿದರು.

ಬಳಿಕ ಮಾತನಾಡಿದ ಅವರು, ಸಿರಿಧಾನ್ಯ ಅತ್ಯಂತ ಆರೋಗ್ಯಯುತ ಆಹಾರವಾಗಿದ್ದು, ಇಂದಿನ ಆಧುನಿಕ ಯುಗದಲ್ಲಿ ಎಲ್ಲರೂ ಸೇವಿಸುವ ಆಹಾರವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಗೆ ವಿಶೇಷ ಪ್ರೋತ್ಸಾಹ ಧನ ನೀಡುತ್ತಿದೆ ಎಂದರು.

ಬೆಂಗಳೂರಿನಲ್ಲಿ ಮುಂದಿನ ತಿಂಗಳು ಸಿರಿಧಾನ್ಯ ಸಾವಯವ ಅಂತರಾಷ್ಟ್ರೀಯ ಮೇಳ ಆಯೋಜಿಸಿದ್ದು ಎಲ್ಲರೂ ಪಾಲ್ಗೊಳುವಂತೆ ಸಚಿವರು ಕರೆ ನೀಡಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಂಟಿ ಕೃಷಿ ನಿರ್ದೇಶಕರಾದ ಅಶೋಕ್ , ಯುವ ಮುಖಂಡರು ಹಾಗೂ ಕಾಲವಿದರಾದ ಸಚ್ಚಿನ್ ಚಲುವರಾಯಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈ ಸಿರಿಧಾನ್ಯ ನಡಿಗೆ ವಿಶೇಷ ಮೆರಗು ತಂದಿತು.

Tags: