ಮಂಡ್ಯ

ಮಂಡ್ಯ ಸಮ್ಮೇಳನ | ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ; ಸಚಿವ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು.

ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸಿರುವ‌ ವೇದಿಕೆಗಳ ನಿರ್ಮಾಣ ಕಾರ್ಯದ ಸಿದ್ಧತೆ ಪರಿಶೀಲನೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಗೆ ಸಾಕಷ್ಟು ಸಂಖ್ಯೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದ ಮೂರು ದಿನ 7 ತಾಲೂಕು ಕೇಂದ್ರಗಳಿಂದ ಸಮ್ಮೇಳನ ನಡೆಯುವ ಸ್ಥಳಕ್ಕೆ 15 ವಿಶೇಷ ವಾಹನಗಳನ್ನು ಒಳಗೊಂಡಂತೆ 105 ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಮತ್ತು ಬೆಂಗಳೂರಿನಿಂದ ಪ್ರತಿ 30 ನಿಮಿಷಕ್ಕೆ ಒಂದರಂತೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಮಂಡ್ಯ ನಗರದ ವಿವಿಧ ಸ್ಥಳಗಳಿಂದ ಸಮ್ಮೇಳನದ ಸ್ಥಳಕ್ಕೆ ಜನರನ್ನು ಕರೆತರಲು 15 ವಾಹನಗಳ ಸಾರಿಗೆ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಲಾಗಿದೆ. ಮೊದಲನೆಯದಾಗಿ ಮಂಡ್ಯ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ, ನಂದಾ ಸರ್ಕಲ್, ಫ್ಯಾಕ್ಟರಿ ಸರ್ಕಲ್, ಸ್ವರ್ಣಸಂದ್ರ, ಮಾಂಡವ್ಯ ಕಾಲೇಜ್, ಉಮ್ಮಡಹಳ್ಳಿ ಗೇಟ್, ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ಎರಡನೆಯದಾಗಿ ಮಂಡ್ಯ ಬಸ್ ನಿಲ್ದಾಣದಿಂದ ಕೋರ್ಟ್ ನಿಲ್ದಾಣ- ವಿಶ್ವವಿದ್ಯಾಲಯ- ಕಲ್ಲಹಳ್ಳಿ- ವಿ.ವಿ.ನಗರ-ಶನೇಶ್ವರ ದೇವಸ್ಥಾನ-ಚಾಮುಂಡೇಶ್ವರಿ ದೇವಸ್ಥಾನ-ಕನ್ನಿಕಾ ಪರಮೇಶ್ವರಿ ದೇವಸ್ಥಾನ-ಕರ್ನಾಟಕ ಬಾರ್ ಸರ್ಕಲ್-ಹೊಸಹಳ್ಳಿ ಸರ್ಕಲ್-ಬೆ.ರಾಮಣ್ಣ ಸರ್ಕಲ್-ಎಂವಿಜಿ ಬೇಕರಿ-ನಂದಾ ಸರ್ಕಲ್-ಫ್ಯಾಕ್ಟರಿ ಸರ್ಕಲ್-ಸ್ವರ್ಣಸಂದ್ರ-ಮಾಂಡವ್ಯ ಕಾಲೇಜ್-ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ಮೂರನೇಯದಾಗಿ ಹುಣಸೇಮರ-ಕಾಳಿಕಾಂಬ ದೇವಸ್ಥಾನ-ನಂದಾ ಸರ್ಕಲ್-ಫ್ಯಾಕ್ಟರಿ ಸರ್ಕಲ್-ಗುತ್ತಲು ಕಾಲೋನಿ-ಜಯಲಕ್ಷ್ಮಿ ಟಾಕೀಸ್-ಅರಕೇಶ್ವರ ದೇವಸ್ಥಾನ-ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ನಾಲ್ಕನೇಯದಾಗಿ ಸತ್ವ ಪಾರ್ಕಿಂಗ್ ಸ್ಥಳದಿಂದ ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ. ಮತ್ತು ಅದೇ ಮಾರ್ಗದಲ್ಲಿ ವಾಪಸ್ ಆಗಲಿದೆ ಎಂದು ಸಚಿವರು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಳಿಕೆರೆ | ಬಸ್‌ ಡಿಕ್ಕಿ; ವ್ಯಕ್ತಿ ಸಾವು

ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ…

6 hours ago

ಮಂಡ್ಯ ಸಮ್ಮೇಳನದಲ್ಲಿ ʻಆಡಳಿತದ ಅಂಗಳದಲ್ಲಿʼ ಪುಸ್ತಕ ಮಾರಾಟ : ಟಿ.ತಮ್ಮೇಗೌಡ

ಮಂಡ್ಯ:  ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾನು ಹಲವು ಪುಸ್ತಕಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ…

7 hours ago

ಮೈಸೂರಿನ ಈ ಪ್ರದೇಶಗಳಲ್ಲಿ ಡಿ.19 ಹಾಗೂ 20 ರಂದು ವಿದ್ಯುತ್‌ ವ್ಯತ್ಯಯ

ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ…

7 hours ago

1 ಕೋಟಿ ರೂ. ವೆಚ್ಚದಲ್ಲಿ ಕಲಾಮಂದಿರ ನವೀಕರಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಹಲವಾರು ವರ್ಷಗಳಿಂದ ದುರಸ್ಥಿಯಾಗಬೇಕಿದ್ದ ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದ ನವೀಕರಣ ಕಾಮಗಾರಿಯನ್ನು ಒಟ್ಟು 1.08 ಕೋಟಿ…

7 hours ago

ಸಾಹಿತ್ಯ ಸಮ್ಮೇಳನ | ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕಾಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಡಿ, ಊರಿಗೊಂದು ಕುರಿ ಸಂಗ್ರಹ…

8 hours ago

ಮಂಡ್ಯ ಸಮ್ಮೇಳನ | ಶಾಲಾ, ಕಾಲೇಜುಗಳಿಗೆ ಎರಡು ದಿನ ರಜೆ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯುತ್ತಿರುವ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ…

8 hours ago