ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ನಗರದ ಸಂಜಯ ವೃತ್ತದಲ್ಲಿ ಚಾಲನೆ ನೀಡಿದರು.
ಶಾಸಕರುಗಳಾದ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮೂಢಾ ಅಧ್ಯಕ್ಷ ನಹೀಮ್, ಜಿಲ್ಲಾಧ್ಯಕ್ಷ ಚಿದಂಬರಂ, ಮೈಶುಗರ್ ಕಂಪನಿ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ದಸರಾದ ವಿಶೇಷ ದೀಪಾಲಂಕಾರದ ಮಾದರಿಯಲ್ಲಿ ಚೆಸ್ಕಾಂ ವತಿಯಿಂದ ನಗರದ ರಸ್ತೆಗಳಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಕಲಾಕೃತಿ, ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾಲಂಕಾರದ ಪ್ರಮುಖ ಆಕರ್ಷಣೆಯಾಗಿವೆ.