ಮಂಡ್ಯ

ಮಂಡ್ಯ ಸಮ್ಮೇಳನ | ಗಮನ ಸೆಳೆದ ನಾಡಪ್ರಭು ಕೆಂಪೇಗೌಡರ ವೇಷಧಾರಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು ಕಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸವಾರಿ ಮಾಡುವ ಮೂಲಕ ವ್ಯಕ್ತಿಯೊಬ್ಬರು ಗಮನ ಸೆಳೆದರು.

ಆಲಗೂಡು ತಾಲ್ಲೂಕಿನ ನಂದಿಪುರ ಗ್ರಾಮದ ಎನ್‌.ಕೆ. ಕುಮಾರ್‌ ಎಂಬುವವರು ಥೇಟ್‌ ಕೆಂಪೇಗೌಡರಂತೆ ಮೀಸೆ, ಮೈಸೂರು ಪೇಟಾದೊಂದಿಗೆ ಜುಬ್ಬ-ಪೈಜಾಮ ಹಾಕಿ ಬಿಳಿ ಕುದುರೆ ಏರಿ ಸವಾರಿ ಮಾಡುವ ಮೂಲಕ ಗಮನ ಸೆಳೆದರು.

ನುಡಿ ಜಾತ್ರೆಗೆ ಬಂದವರು ಕೆಂಪೇಗೌಡ ವೇಷಧಾರಿಯ ಎದುರು ನಿಂತು ಸೆಲ್ಫಿ ತೆಗೆದುಕೊಂಡರು. ಶಾಲೆಯ ಮಕ್ಕಳು ಕೂಡ ತಮ್ಮ ಶಿಕ್ಷಕರ ಮೊಬೈಲ್‌ನಲ್ಲಿ ಪೋಟೋ ತೆಗೆದರು. ದಾರಿ ಉದ್ದಕ್ಕೂ ಕನ್ನಡ ಪ್ರೇಮಿಗಳು ಕೂಡ ಇವರನ್ನುಮಾತನಾಡಿಸಿ ಪೋಟೋ ತೆಗೆದುಕೊಂಡರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

12 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

23 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

38 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

39 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

43 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

46 mins ago