Mysore
15
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಮಂಡ್ಯ ಸಮ್ಮೇಳನ | ಯಶಸ್ಸಿಗೆ ಶ್ರಮಿಸಿದ ಜನಪ್ರತಿನಿಧಿ, ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಆಟೋ ಚಾಲಕರ ಸಂಘ

ಮಂಡ್ಯ; ಜಿಲ್ಲೆಯಲ್ಲಿ ನೆರವೇರಿದ ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿ ವರ್ಗ, ಸಾಹಿತ್ಯಾಸಕ್ತರು ಹಾಗೂ ಜಿಲ್ಲೆ ಮತ್ತು ರಾಜ್ಯದ ಎಲ್ಲಾ ಸಾರ್ವಜನರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜೀವ್‌ಗಾಂಧಿ ಆಟೋ ಟ್ಯಾಕ್ಸಿ ಚಾಲಕರ ವೇದಿಕೆಯ ಅಧ್ಯಕ್ಷ ಕೃಷ್ಣ.ಟಿ. ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸ್ಮಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ವೇದಿಕೆಯ ವತಿಯಿಂದ ೮೭ ಆಟೋಗಳನ್ನು ಹೂವುಗಳಿಂದ ಅಲಂಕರಿಸಿ, ೮೭ ಸಮ್ಮೇಳನಾಧ್ಯಕ್ಷರ ಭಾವಚಿತ್ರಗಳೊಂದಿಗೆ ಭಾಗವಹಿಸುವ ಮೂಲಕ ಸಮ್ಮೇಳನದ ಯಶಸ್ಸಿಗೆ ಬೆಂಬಲ ವ್ಯಕ್ತಪಡಿಸಿದ್ದೆವು ಎಂದರು.

ಜಿಲ್ಲೆಯಲ್ಲಿ ಇಂತಹ ಬೃಹತ್ ಕಾರ್ಯಕ್ರಮಗಳು ಹೆಚ್ಚು ಜರುಗಬೇಕು. ಇದರಿಂದ ಜಿಲ್ಲೆಯ ಹಿರಿಮೆ ಹೆಚ್ಚಲಿದ್ದು, ಅಂತವುಗಳ ಆಚರಣೆಗೆ ಆಟೋ ಚಾಲಕರ ಸಂಘವು ಸದಾಸಿದ್ಧವಿಲಿದೆ. ಅಂತೆಯೇ ಜಿಲ್ಲೆಗೆ ಕೈಗಾರಿಕೆಗಳು ಮತ್ತು ಐಟಿ-ಬಿಟಿ ವಲಯಗಳನ್ನು ತರುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಶ್ರಮಿಸುವಂತಾಗಲಿ ಎಂದು ಆಶಿಸಿದರು.

ಇಂತಹ ಸಮ್ಮೇಳನದಿಂದ ಆಟೋ ಚಾಲಕರ ದುಡಿಮೆಗೂ ಸಹಕಾರವಾಗಲಿದೆ. ಆಟೋ ಚಾಲಕರು ಪ್ರಯಾಣ ಬಯಸುವವರ ನೆರವಿಗೆ ಸದಾಸಿದ್ದವಿದ್ದೇವೆ. ಇದೀಗ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಪಿ.ರವಿಕುಮಾರ್‌ಗೌಡ, ವಿಧಾನ ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಸಮ್ಮೇಳನಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಸತ್ಯನಾರಾಯಣ, ಖಜಾಂಚಿ ಕೃಷ್ಣ, ಕಾರ್ಯದರ್ಶಿ ಎಂ.ರಾಜು, ಸಂಘಟನಾ ಕಾರ್ಯದರ್ಶಿ ಗುರು ಶಂಕರ್, ಬೋರಲಿಂಗ, ರಮೇಶ್‌ಬಾಬು ಇದ್ದರು.

Tags:
error: Content is protected !!