ಮಂಡ್ಯ; ಜಿಲ್ಲೆಯಲ್ಲಿ ನೆರವೇರಿದ ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿ ವರ್ಗ, ಸಾಹಿತ್ಯಾಸಕ್ತರು ಹಾಗೂ ಜಿಲ್ಲೆ ಮತ್ತು ರಾಜ್ಯದ ಎಲ್ಲಾ ಸಾರ್ವಜನರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜೀವ್‌ಗಾಂಧಿ ಆಟೋ ಟ್ಯಾಕ್ಸಿ ಚಾಲಕರ ವೇದಿಕೆಯ ಅಧ್ಯಕ್ಷ ಕೃಷ್ಣ.ಟಿ. ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸ್ಮಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ವೇದಿಕೆಯ ವತಿಯಿಂದ ೮೭ ಆಟೋಗಳನ್ನು ಹೂವುಗಳಿಂದ ಅಲಂಕರಿಸಿ, ೮೭ ಸಮ್ಮೇಳನಾಧ್ಯಕ್ಷರ ಭಾವಚಿತ್ರಗಳೊಂದಿಗೆ ಭಾಗವಹಿಸುವ ಮೂಲಕ ಸಮ್ಮೇಳನದ ಯಶಸ್ಸಿಗೆ ಬೆಂಬಲ ವ್ಯಕ್ತಪಡಿಸಿದ್ದೆವು ಎಂದರು.
ಜಿಲ್ಲೆಯಲ್ಲಿ ಇಂತಹ ಬೃಹತ್ ಕಾರ್ಯಕ್ರಮಗಳು ಹೆಚ್ಚು ಜರುಗಬೇಕು. ಇದರಿಂದ ಜಿಲ್ಲೆಯ ಹಿರಿಮೆ ಹೆಚ್ಚಲಿದ್ದು, ಅಂತವುಗಳ ಆಚರಣೆಗೆ ಆಟೋ ಚಾಲಕರ ಸಂಘವು ಸದಾಸಿದ್ಧವಿಲಿದೆ. ಅಂತೆಯೇ ಜಿಲ್ಲೆಗೆ ಕೈಗಾರಿಕೆಗಳು ಮತ್ತು ಐಟಿ-ಬಿಟಿ ವಲಯಗಳನ್ನು ತರುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಶ್ರಮಿಸುವಂತಾಗಲಿ ಎಂದು ಆಶಿಸಿದರು.
ಇಂತಹ ಸಮ್ಮೇಳನದಿಂದ ಆಟೋ ಚಾಲಕರ ದುಡಿಮೆಗೂ ಸಹಕಾರವಾಗಲಿದೆ. ಆಟೋ ಚಾಲಕರು ಪ್ರಯಾಣ ಬಯಸುವವರ ನೆರವಿಗೆ ಸದಾಸಿದ್ದವಿದ್ದೇವೆ. ಇದೀಗ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಪಿ.ರವಿಕುಮಾರ್‌ಗೌಡ, ವಿಧಾನ ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಸಮ್ಮೇಳನಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಸತ್ಯನಾರಾಯಣ, ಖಜಾಂಚಿ ಕೃಷ್ಣ, ಕಾರ್ಯದರ್ಶಿ ಎಂ.ರಾಜು, ಸಂಘಟನಾ ಕಾರ್ಯದರ್ಶಿ ಗುರು ಶಂಕರ್, ಬೋರಲಿಂಗ, ರಮೇಶ್‌ಬಾಬು ಇದ್ದರು.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…