ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ ಶಾಸಕ ರವಿಕುಮಾರ್ ಗೌಡ ಅವರು ಉತ್ಸಾಹಿ ಶಾಸಕರೆಂದು ಸಚಿವ ಚಲುವರಾಯಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.
ಮಂಡ್ಯ ನಗರದ ಸಿಲ್ವರ್ ಜ್ಯುಬಿಲಿ ಪಾರ್ಕ್‌ನಲ್ಲಿ ಆಯೋಜನೆ ಮಾಡಿದ್ದ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲಾ ಕೇಂದ್ರದ ವೃತ್ತಗಳ ಸೌಂದರ್ಯಿಕರಣ, ಉತ್ತಮ ರಸ್ತೆಗಳ ನಿರ್ಮಾಣ ಹಾಗೂ ಅಗತ್ಯ ಸೌಲಭ್ಯಗಳ ಅಳವಡಿಕೆಯಿಂದ ಜಿಲ್ಲಾ ಕೇಂದ್ರಕ್ಕೆ ಇತರೆ ತಾಲ್ಲೂಕುಗಳ ಲಕ್ಷಾಂತರ ಜನತೆ ಬಂದು ಹೋಗುವ ವಾತಾವರಣ ಸೃಷ್ಟಿಯಾಗಲಿದೆ ಎಂದು ಹೇಳಿದರು.
ಜಿಲ್ಲಾ ಕೇಂದ್ರದ ನಿರೀಕ್ಷಿತ ಅಭಿವೃದ್ಧಿಗೆ ನನ್ನೊಡನೆ ಸ್ಪಂದಿಸುವ ಶಾಸಕರು ಚುನಾಯಿತರಾಗಬೇಕೆಂಬ ನನ್ನ ಕನಸು ಸಾಕಾರಗೊಂಡಿದೆ. ಜಿಲ್ಲೆಯ ಆರು ಶಾಸಕರು ಸೇರಿ ರಾಜ್ಯದ 139 ಶಾಸಕರ ಬಲವುಳ್ಳ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಅಭಿವೃದ್ಧಿಗೆ ಗಮನಹರಿಸುವ ಜವಾಬ್ದಾರಿ ನಮ್ಮ ಸರ್ಕಾರಕ್ಕಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…