Mysore
30
clear sky

Social Media

ಗುರುವಾರ, 13 ಫೆಬ್ರವರಿ 2025
Light
Dark

ಮಂಡ್ಯ | 23ರಂದು ನಿರಂತರ 24ಗಂಟೆ ರಕ್ತದಾನ ಶಿಬಿರ

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೀವಧಾರೆ ಟ್ರಸ್ಟ್‌ನ ನಟರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್‌ನ ವತಿಯಿಂದ ಇದುವರೆಗೂ ೩೪೪ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ೪೩ ಸಾವಿರ ಯೂನಿಟ್ ರಕ್ತವನ್ನು ಸಂಗ್ರಹಿಸಿ ಯೋಧರ ಆಸ್ಪತ್ರೆಯನ್ನೂ ಒಳಗೊಂಡಂತೆ ಸರ್ಕಾರಿ ರಕ್ತನಿಧಿ ಕೇಂದ್ರಗಳಿಗೆ ನಿರಂತರವಾಗಿ ಕಾಲಕಾಲಕ್ಕೆ ಸಂಗ್ರಹಿಸಿದ ರಕ್ತ ಒದಗಿಸುತ್ತಿದೆ ಎಂದರು.

ಜನವರಿ ೨೩ರ ಬೆಳಿಗ್ಗೆ ೦೮ ಪ್ರಾರಂಭವಾಗುವ ರಕ್ತದಾನ ಶಿಬಿರ ಜನವರಿ ೨೪ರ ಬೆಳಿಗ್ಗೆ ೦೮ ಗಂಟೆ ವರೆಗೂ ನಡೆಯಲಿದೆ. ರಕ್ತದಾನ ಶಿಬಿರ ಸಂಬಂಧ ೧೨೮ ಹಳ್ಳಿಗಳಿಗೆ ಭೇಟಿ ಪ್ರಚಾರ ಮಾಡಲಾಗಿದೆ. ಜನವರಿ ೧೮ರಂದು ನಗರದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಮೂಲಕ ಪ್ರಚಾರ ಮಾಡಲಾಗಿದೆ. ಟ್ರಸ್ಟ್‌ನಿಂದ ನಡೆಯುವ ೩೪೫ನೇ ರಕ್ತದಾನ ಶಿಬಿರದಲ್ಲಿ ೧೫೦೦ ಯುನಿಟ್ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾರ್ಯಕ್ರಮದಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿದ್ದು, ಸರ್ಕಾರಿ ಆಸ್ಪತ್ರೆಯಿಂದ ರಕ್ತ ಸಂಗ್ರಹಿಸಲು ವೈದ್ಯ ಸಿಬ್ಬಂದಿಗಳು ೩ ಪಾಳಯದಲ್ಲಿ ಕಾರ್ಯನಿರ್ವಹಿಸಲಿದ್ದು, ಸರ್ಕಾರಿ ಆಸ್ಪತ್ರೆಯಿಂದ ೧೫೦ ಹಾಸಿಗೆ ವ್ಯವಸ್ಥೆಯನ್ನು ಒದಗಿಸಲಾಗುವುದು. ಸಂಗ್ರಹವಾದ ರಕ್ತವನ್ನು ಸೈನಿಕ ಆಸ್ಪತ್ರೆಗೆ ಬೇಕಾಗಿರುಷ್ಟು ತಲುಪಿಸಲಾಗುವುದು. ಉಳಿದ ಎಲ್ಲ ರಕ್ತವನ್ನು ಸರ್ಕಾರಿ ರಕ್ತ ನಿಧಿ ಕೇಂದ್ರ ಹಾಗೂ ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಗಣೇಶ್, ಅಭಿ, ಮಹದೇವ, ಉದಯ್, ರವಕುಮಾರ್, ಕುಮಾರ್, ಅನ್ವೇಶ್ ಇದ್ದರು.

Tags: