Mysore
26
broken clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಜಗದ ಮೂಲೆ ಮೂಲೆಗೂ ಕನ್ನಡ ವಾಣಿ ಹರಡಲಿ: ಚಲುವರಾಯಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಜಗದ ಮೂಲೆಮೂಲೆಗೂ ಕನ್ನಡದ ವಾಣಿ ಹರಡಲಿ. ಕನ್ನಡ ಭಾಷೆಯನ್ನು ಪ್ರೇಮಿಸಬೇಕು. ನೆಲ, ಜಲದ ಉಳಿವಿಗಾಗಿ ಒಟ್ಟಾಗಿ ನಿಲ್ಲಬೇಕು. ಎಲ್ಲೇ ಇದ್ದರೂ ಕನ್ನಡಿಗರಾಗಿ ನಾಡಿನ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದರು.

ಎರಡು ಸಾವಿರ ವರ್ಷಕ್ಕಿಂತ ಹೆಚ್ಚು ಇತಿಹಾಸವಿರುವ ಕನ್ನಡ ಭಾಷೆಗೆ ಸಾಕಷ್ಟು ಇತಿಹಾಸವಿದೆ. ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಎಂದರೆ ಅದು ನಮ್ಮ ಮಂಡ್ಯ. ಗ್ರಾಮೀಣ ಸೊಗಡನ್ನು ಮೈಗೂಡಿಸಿಕೊಂಡಿರುವ ಮಂಡ್ಯ ಜಿಲ್ಲೆ ಸಾಹಿತ್ಯ ಕ್ಷೇತ್ರಕ್ಕೂ ದೊಡ್ಡ ಕೊಡುಗೆ ನೀಡಿದೆ ಎಂದರು.

ಬಿ.ಎಂ.ಶ್ರೀಕಂಠಯ್ಯ, ಕೆ.ಎಸ್.ನರಸಿಂಹಸ್ವಾಮಿ, ಪು.ತಿ.ನರಸಿಂಹಾಚಾರ್, ಭಾಷಾತಜ್ಞ, ಸಂಶೋಧಕ ವೆಂಕಟಸುಬ್ಬಯ್ಯ, ಸೀತಾಸುತ, ಜಾನಪದ ತಜ್ಞ ಡಾ. ಎಚ್.ಎಲ್.ನಾಗೇಗೌಡರು, ಬೊಮ್ಮರಸೇಗೌಡ ಅವರಂತಹ ಅನೇಕ ಶ್ರೇಷ್ಠ ಸಾಹಿತಿಗಳನ್ನು ನಾಡಿಗೆ ಕೊಟ್ಟಿರುವ ಜಿಲ್ಲೆ ಮಂಡ್ಯ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ ಎಂದರು.

Tags:
error: Content is protected !!