safety measures in homestays
ಮಂಡ್ಯ : ಪ್ರವಾಸೋದ್ಯಮದ ವ್ಯಾಪ್ತಿಗೆ ಬರುವ ಹೊಂ ಸ್ಟೇಗಳಲ್ಲಿ ಸುರಕ್ಷತಾ ಮತ್ತು ರಕ್ಷಣೆಯ ಕ್ರಮಗಳನ್ನು (Safety measures in Homestays) ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು (ಏ.17) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿರುವ 4 ಹೊಸ ಹೊಂ ಸ್ಟೇ ಗಳಿಗೆ ಪರವಾನಿಗೆ ನೀಡುವ ಮೊದಲು ಹೊಂ ಸ್ಟೇ ಮಾಲೀಕರು ಗ್ರಾಮ ಪಂಚಾಯಿತಿಯಿಂದ ಪರವಾನಿಗೆ ಪಡೆದು ಹೊಂ ಸ್ಟೇ ನಡೆಸುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಂ ಸ್ಟೇಗಳು ಸರ್ಕಾರದ ನಿಯಮಗಳು ಪಾಲಿಸಬೇಕು, ಗುಣಮಟ್ಟದ ಆರೋಗ್ಯ, ನೈರ್ಮಲ್ಯ ಮತ್ತು ಅಗ್ನಿ ಸುರಕ್ಷತೆ ಒಳಗೊಂಡಂತೆ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ ಎಂದರು.
ಹೊಸದಾಗಿ ಪರವಾನಿಗೆ ನೀಡುವ ಸಂದರ್ಭದಲ್ಲಿ ಪರೀಶೀಲನೆಗೆ ಸಂಬಂಧ ಪಟ್ಟ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ, ಅಗ್ನಿಶಾಮಕ ದಳದ ಉಪನಿರ್ದೇಶಕರು, ತಾಲ್ಲೂಕು ಆರೋಗ್ಯಾಧಿಕಾರಿ, ಸ್ಥಳೀಯ ಆರಕ್ಷಕ ನಿರೀಕ್ಷಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರನ್ನು ಒಳಗೊಂಡ ಒಂದು ವಿಶೇಷ ತಂಡ ರಚಿಸಿಕೊಂಡು ಪರೀಶೀಲನೆ ನಡೆಸಬೇಕು ಎಂದರು.
ಜಲಸಾಹಸ ಕ್ರೀಡೆ;-
ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ತಿಳಿಸಿದಂತೆ, ರಾಜ್ಯದ ಜಾಲಾಶಯಗಳ ಹಿನ್ನೀರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲ ಕ್ರೀಡೆ ಮತ್ತು ಜಲಸಾಹಸ ಕ್ರೀಡೆಗಳನ್ನು ಯೋಜಿಸಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿರುವ ಹಿನ್ನೆಲೆ ಜಿಲ್ಲೆಯಲ್ಲಿ 5 ಜಲಾ ಕ್ರೀಡೆಗೆ ಅನುಕೂಲಕರ ಜಾಗಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದರು.
ನುರಿತ ತಜ್ಞರ ತಂಡವನ್ನು ರಚಿಸಿ ಜಲ ಸಾಹಸ ಮತ್ತು ಜಲ ಕ್ರೀಡೆಗಳಿಗೆ ಗುರುತಿಸಲಾಗಿರುವ ಜಾಗಗಳು ಸೂಕ್ತವಾಗಿ ಇದೆಯೇ ಮತ್ತು ಎಲ್ಲಾ ರೀತಿಯಿಂದ ಸುರಕ್ಷಿತವಾದ ಕ್ರಮಗಳನ್ನು ಕೈಗೊಳ್ಳಲು ಯೋಗ್ಯವಾದ ಸ್ಥಳವಾಗಿದೆಯೇ ಎಂದು ಪರೀಶೀಲನೆ ನಡೆಸಿ ಇ- ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.
ಯಾತ್ರಿನಿವಾಸಿ ಕಟ್ಟಡ ನಿರ್ವಹಣೆ:-
ಜಿಲ್ಲೆಯ ನಾಗಮಂಗಲ ತಾಲೂಕಿನ ಮುಳುಕಟ್ಟೆ ಹಾಗೂ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಿರ್ಮಿಸಿರುವ ಯಾತ್ರಿನಿವಾಸ ಕಟ್ಟಡಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಲು ಇ- ಟೆಂಡರ್ ಕರೆದು, ಯಾತ್ರಿಕರು ತಂಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ ಮಾತನಾಡಿ, ಸರ್ಕಾರದ ಆದೇಶದಂತೆ ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯಲ್ಲಿ ನೂತನ ಪ್ರವಾಸಿ ತಾಣಗಳನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಗುರುತಿಸಿರುವ ಎಲ್ಲಾ ತಾಣಗಳು ತನ್ನದೇ ಆದ ವಿಶೇಷ, ವಿಶಿಷ್ಟತೆ, ಮಹತ್ವವನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಸಾಮರ್ಥ್ಯ ಹೊಂದಿದೆ ಎಂದರು.
ಮಂಡ್ಯ- 12, ಮಳವಳ್ಳಿ- 11, ಮದ್ದೂರು- 18, ಶ್ರೀರಂಗಪಟ್ಟಣ – 24, ಪಾಂಡವಪುರ -13, ನಾಗಮಂಗಲ -10, ಕೆ ಆರ್ ಪೇಟೆ -18 ಸೇರಿದಂತೆ ಒಟ್ಟು -106 ನೂತನ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಜಿಲ್ಲಾ ಕುಟುಂಬ ಮತ್ತು ಆರೋಗ್ಯ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ನಂದೀಶ್, ನಿರ್ಮಿತಿ ಕೇಂದ್ರದ ಜಯ ಪ್ರಕಾಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…
ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…