ಮದ್ದೂರು: ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು.
ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ, ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಶಿಲ್ದಾರ್‌ಗೆ ಸೂಚನೆ ನೀಡಿದರು.
ಇ-ಆಫೀಸ್ ವ್ಯವಸ್ಥೆಯಲ್ಲಿ ಬಾಕಿಇರುವ ಎಲ್ಲಾ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ, ಡಿಜಿಟಲ್ ಕಾರ್ಯವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.
ಸಾರ್ವಜನಿಕರ ಅನಗತ್ಯ ಅಲೆದಾಟ ತಪ್ಪಿಸುವ ಉದ್ದೇಶದಿಂದ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.





