ಮಂಡ್ಯ

ಮದ್ದೂರು| ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ದಿಢೀರ್‌ ಭೇಟಿ

ಮದ್ದೂರು: ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು.

ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ, ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಶಿಲ್ದಾರ್‌ಗೆ ಸೂಚನೆ ನೀಡಿದರು.

ಇ-ಆಫೀಸ್‌ ವ್ಯವಸ್ಥೆಯಲ್ಲಿ ಬಾಕಿಇರುವ ಎಲ್ಲಾ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ, ಡಿಜಿಟಲ್‌ ಕಾರ್ಯವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.

ಸಾರ್ವಜನಿಕರ ಅನಗತ್ಯ ಅಲೆದಾಟ ತಪ್ಪಿಸುವ ಉದ್ದೇಶದಿಂದ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

14 mins ago

ಮುಖ್ಯಮಂತ್ರಿಗೆ 77.17 ಕೋಟಿ ರೂ.ಲಾಭಾಂಶ ಅರ್ಪಿಸಿದ ಕ್ರೆಡಲ್‌

ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ…

20 mins ago

ಕೆಲಸ ಮಾಡುವ ಮಹಿಳೆಯರಿಗೆ ಬೆಂಗಳೂರು ಬೆಸ್ಟ್‌ & ಫಸ್ಟ್‌ : ವರದಿ

ಬೆಂಗಳೂರು : ಉದ್ಯೋಗ ಮಾಡುವ ಮಹಿಳೆಯರಿಗೆ ಅತ್ಯುತ್ತಮ ನಗರ ಎಂಬ ಕೀರ್ತಿ ಬೆಂಗಳೂರಿಗೆ ಸಿಕ್ಕಿದೆ. ಮುಂಬೈ, ಚೆನ್ನೈ ಸೇರಿದಂತೆ 16…

29 mins ago

ಮಹಿಳಾ ವಿವಸ್ತ್ರ ಪ್ರಕರಣ : ಸ್ವಯಂ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ…

40 mins ago

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ತಲೆತಗ್ಗಿಸುವ ಘಟನೆ: ಅರಗ ಜ್ಞಾನೇಂದ್ರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…

3 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತೆ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…

3 hours ago