ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳಲ್ಲೂ ಗೆಲ್ಲುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದ್ದು, ಕೇವಲ ಒಂದು ಸ್ಥಾನದಲ್ಲಿ ಜಯಗಳಿಸುವ ಮೂಲಕ ಜಾ.ದಳ ಮರ್ಯಾದೆ ಉಳಿಸಿಕೊಂಡಿದೆ.
ಒಟ್ಟು ೧೨ ನಿರ್ದೇಶಕ ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರು ೯ ಸ್ಥಾನಗಳಲ್ಲಿ ಆಯ್ಕೆಯಾಗುವ ಮೂಲಕ ಮೊನ್ನೆಯಷ್ಟೇ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ೩ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಮಂಡ್ಯ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾದ ಸತೀಶ್ (೩೫ ಮತಗಳು), ಕೆ.ಆರ್.ಪೇಟೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಶೀಳನೆರೆ ಅಂಬರೀಶ್ (೧೫ ಮತಗಳು) ಹಾಗೂ ಪಾಂಡವಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಜಾ.ದಳ ಬೆಂಬಲಿತ ಪುಟ್ಟಸ್ವಾಮಿಗೌಡ (೧೫ ಮತಗಳು) ಚುನಾಯಿತರಾದರು.
ಇದನ್ನು ಓದಿ: ವಾರಾಂತ್ಯ ರಜೆ : ಮ.ಬೆಟ್ಟಕ್ಕೆ ಹರಿದು ಬಂದು ಜನಸಾಗರ
ಕಾಂಗ್ರೆಸ್ ಪಕ್ಷದಿಂದ ಅವಿರೋಧ ಆಯ್ಕೆಯಾದವರು:
ಮಳವಳ್ಳಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ,
ನಾಗಮಂಗಲ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸಿ.ಸಚ್ಚಿನ್ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ಗಳ ಕ್ಷೇತ್ರದಿಂದ ಕೆ.ವಿ.ದಿನೇಶ್,
ಮಂಡ್ಯ ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು (ನೇಕಾರರ ಸಹಕಾರ ಸಂಘಗಳು ಸೇರಿದಂತೆ) ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳು (ಫಾಮಿಂಗ್ ಸಹಕಾರ ಸಂಘಗಳು ಸೇರಿದಂತೆ) ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಕೆ.ಸಿ.ಜೋಗಿಗೌಡ,
ಮಂಡ್ಯ ಜಿಲ್ಲೆಯ ಬಳಕೆದಾರರ ಮತ್ತು ಸಂಸ್ಕರಣ ಸಹಕಾರ ಸಂಘಗಳ ಮತ್ತು ನಗರ ಸಹಕಾರ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ಅಶೋಕ್, ಮದ್ದೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ.ಸಂದರ್ಶ , ಶ್ರೀರಂಗಪಟ್ಟಣ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ.ಗಿರೀಶ್, ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಎ.ವಿಜೇಂದ್ರಮೂರ್ತಿ, ಮಂಡ್ಯ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಚಲುವರಾಜು ಆಯ್ಕೆಯಾಗಿದ್ದಾರೆ.
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…