ಮಂಡ್ಯ

ಮಂಡ್ಯ | ಡಿಸಿಸಿ ಬ್ಯಾಂಕ್‌ ಚುನಾವಣೆ ; ಕಾಂಗ್ರೆಸ್‌ ಜಯಭೇರಿ ; ಜಾ.ದಳಕ್ಕೆ ಮುಖಭಂಗ

ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳಲ್ಲೂ ಗೆಲ್ಲುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದ್ದು, ಕೇವಲ ಒಂದು ಸ್ಥಾನದಲ್ಲಿ ಜಯಗಳಿಸುವ ಮೂಲಕ ಜಾ.ದಳ ಮರ್ಯಾದೆ ಉಳಿಸಿಕೊಂಡಿದೆ.

ಒಟ್ಟು ೧೨ ನಿರ್ದೇಶಕ ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರು ೯ ಸ್ಥಾನಗಳಲ್ಲಿ ಆಯ್ಕೆಯಾಗುವ ಮೂಲಕ ಮೊನ್ನೆಯಷ್ಟೇ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ೩ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಮಂಡ್ಯ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾದ ಸತೀಶ್ (೩೫ ಮತಗಳು), ಕೆ.ಆರ್.ಪೇಟೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಶೀಳನೆರೆ ಅಂಬರೀಶ್ (೧೫ ಮತಗಳು) ಹಾಗೂ ಪಾಂಡವಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಜಾ.ದಳ ಬೆಂಬಲಿತ ಪುಟ್ಟಸ್ವಾಮಿಗೌಡ (೧೫ ಮತಗಳು) ಚುನಾಯಿತರಾದರು.

ಇದನ್ನು ಓದಿ: ವಾರಾಂತ್ಯ ರಜೆ : ಮ.ಬೆಟ್ಟಕ್ಕೆ ಹರಿದು ಬಂದು ಜನಸಾಗರ

ಕಾಂಗ್ರೆಸ್ ಪಕ್ಷದಿಂದ ಅವಿರೋಧ ಆಯ್ಕೆಯಾದವರು:

ಮಳವಳ್ಳಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ,

ನಾಗಮಂಗಲ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸಿ.ಸಚ್ಚಿನ್ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ಗಳ ಕ್ಷೇತ್ರದಿಂದ ಕೆ.ವಿ.ದಿನೇಶ್,

ಮಂಡ್ಯ ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು (ನೇಕಾರರ ಸಹಕಾರ ಸಂಘಗಳು ಸೇರಿದಂತೆ) ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳು (ಫಾಮಿಂಗ್ ಸಹಕಾರ ಸಂಘಗಳು ಸೇರಿದಂತೆ) ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಕೆ.ಸಿ.ಜೋಗಿಗೌಡ,

ಮಂಡ್ಯ ಜಿಲ್ಲೆಯ ಬಳಕೆದಾರರ ಮತ್ತು ಸಂಸ್ಕರಣ ಸಹಕಾರ ಸಂಘಗಳ ಮತ್ತು ನಗರ ಸಹಕಾರ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ಅಶೋಕ್, ಮದ್ದೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ.ಸಂದರ್ಶ , ಶ್ರೀರಂಗಪಟ್ಟಣ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ.ಗಿರೀಶ್, ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಎ.ವಿಜೇಂದ್ರಮೂರ್ತಿ, ಮಂಡ್ಯ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಚಲುವರಾಜು ಆಯ್ಕೆಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

18 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

18 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago