ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತ್ತು ಮಾಡಿ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಆದೇಶಿಸಿದ್ದಾರೆ.
ಸಿಎಲ್ 7 ಲೈಸೆನ್ಸ್ ನೀಡಲು ಕೆ.ಆರ್.ಪೇಟೆ ತಾಲ್ಲೂಕಿನ ಸೋಮನಹಳ್ಳಿಯ ಸುಂದರ್ ಎಂಬವರಿಂದ 60 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದ ಹಿನ್ನೆಲೆಯಲ್ಲಿ ಲೈಸೆನ್ಸ್ ನೀಡದೆ ಸಣ್ಣಪುಟ್ಟ ನೆಪ ಹೇಳಿ ಪದೇ ಪದೇ ವಜಾ ಮಾಡುತ್ತಲೇ ಬಂದಿದ್ದರು.
ಲೈಸೆನ್ಸ್ ನೀಡುವಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಲೈಸೆನ್ಸ್ ನೀಡಿರಲಿಲ್ಲ. ಲೈಸೆನ್ಸ್ ನೀಡಲು 60 ಲಕ್ಷ ರೂ. ಲಂಚಕ್ಕೆ ನಾಗಶಯನ ಅವರು ಬೇಡಿಕೆ ಇಟ್ಟಿರುವುದು ಆಡಿಯೋ ಸಹಿತ ಸುಂದರ್ ಅವರು ದೂರು ನೀಡಿ ನ್ಯಾಯಕ್ಕಾಗಿ ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ಮಾಡುತ್ತಲೇ ಬಂದಿದ್ದರು. ಇದೇ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು.
ಈ ವಿಚಾರವಾಗಿ ಮಂಗಳವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶನದಲ್ಲೂ ಚರ್ಚೆಯಾದ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ, ನಾಗಶಯನ ಅವರನ್ನು ಅಮಾನತ್ತು ಮಾಡುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಅವರು ಅಮಾನತ್ತು ಮಾಡಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…