ಮಂಡ್ಯ

ಮಂಡ್ಯ : ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಶುಚಿತ್ವಕ್ಕೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ತಲೆಯೆತ್ತಿರುವ ಹೋಟೆಲ್, ರೆಸ್ಟೋರೆಂಟ್, ತಿಂಡಿ ತಿನಿಸು, ಮಾಂಸಾಹಾರ ಸೇರಿದಂತೆ ಎಲ್ಲ ಬಗೆಯ ಆಹಾರ ಸಂಬಂಧಿತ ವ್ಯಾಪಾರ ಮಾಡುವವರು ನೊಂದಣಿ ಮಾಡಿಸಿ, ಕಡ್ಡಯಾವಾಗಿ ಆಹಾರ ಸ್ವಚ್ಛತಾ ಹಾಗೂ ಪರಿಸರ ನೈರ್ಮಲ್ಯ ಸಂಬಂಧಿತ ನಿಯಮಗಳನ್ನು ಪಾಲಿಸಬೇಕು ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಲವು ಆಹಾರ ಮಳಿಗೆಗಳು ನಿಯಮ ಪಾಲನೆ ಮಾಡದೇ ಇದ್ದು, ಗುಣಮಟ್ಟವಿಲ್ಲದ, ಅಸುರಕ್ಷಿತ ಆಹಾರ ತಯಾರಿಸಿ ವಿತರಣೆ ಮಾಡುತ್ತಿದ್ದಾರೆ ಎಂದು ದೂರಿದರು.

ಆಹಾರ ತಯಾರಿಕೆಗೆ ಸ್ವಚ್ಛತೆಯ ನಿಯಮಗಳನ್ನು ಪಾಲನೆ ಮಾಡದೇ ಇದ್ದು, ಪಡೆಯುವ ಹಣಕ್ಕೆ ಸರಿಯಾದ ಪ್ರಮಾಣದ ಆಹಾರ ಪದಾರ್ಥಗಳನ್ನು ನೀಡುತ್ತಿಲ್ಲ, ಅಲ್ಲದೇ ರಾಸಾಯನಿಕ ಅಂಶಗಳನ್ನು ಆಹಾರದಲ್ಲಿ ಸೇರಿಸಿ ಸಾರ್ವಜನಿಕರ ಆರೋಗ್ಯಕ್ಕೆ ಕುತ್ತು ತಂದೊಡ್ಡುತ್ತಿದ್ದಾರೆ. ಅದು ಮಾತ್ರವಲ್ಲದೇ ಸ್ವಚ್ಛತೆಯಿರದ ಕಡೆಗಳಲ್ಲಿ ಆಹಾರ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆಹಾರ ಇಲಾಖೆಗೆ ಸಂಬಂಧಿತ ಅಧಿಕಾರಿಗಳು, ನಗರಸಭೆಯ ಆರೋಗ್ಯ ಪರಿವೀಕ್ಷಕರು ಉದಾಸೀನತೆ ತೋರುತ್ತಿರುವುದರಿಂದಾಗಿ ಪರವಾನಗಿ ಪಡೆಯದೇ ಇಂದು ಎಲ್ಲೆಂದರಲ್ಲಿ ಆಹಾರ ತಯಾರಿಸುವ ಹೋಟೆಲ್, ಕೇಂದ್ರಗಳು ಆರಂಭಗೊಳ್ಳುತ್ತಿದ್ದು, ಸಾರ್ವಜನಿಕರನ್ನು ಅನಾರೋಗ್ಯದ ಕೂಪಕ್ಕೆ ತಳ್ಳುತ್ತಿದ್ದಾರೆ. ಅಧಿಕಾರಿಗಳು ತಮಗೆ ಬೇಕಾದದ್ದನ್ನು ಪಡೆದು ಏನು ಕಾಣದಂತೆ ಸುಮ್ಮನಾಗುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಆಹಾರ ಪದಾರ್ಥಗಳನ್ನು ನೀಡುವ ವ್ಯಾಪಾರ ಮಾಡುವವರು ಆಹಾರ ಪರವಾನಿ ಪಡೆದು, ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಆಹಾರ ಪದಾರ್ಥಗಳ ಬೆಲೆ ಮತ್ತು ತೂಕವನ್ನು ಫಲಕಗಳ ಮೂಲಕ ಪ್ರಕಟಿಸಬೇಕು. ಇಲ್ಲವಾದಲ್ಲಿ ಆಹಾರ ಸುರಕ್ಷತಾ ಕಾಯ್ದೆ ೨೧ ಮತ್ತು ೬೩ರಂತೆ ದಂಡ ಅಥವಾ ಸೆರೆವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜೋಸೆಫ್ ರಾಮು, ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಜಿಲ್ಲಾ ಸಂಚಾಲಕ ಸಲ್ಮಾನ್, ಕರವೇ(ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಅಶೋಕ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

1 hour ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

1 hour ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

2 hours ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

2 hours ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

2 hours ago