ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದಾಗಿ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದು ಕ್ರಾಂತಿಕಾರಿ ಪಾದಯಾತ್ರೆಯ ರೂವಾರಿ ಬಿ.ಆರ್.ಬಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗಾಗಿ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದು, ಸದರಿ ಹೋರಾಟದಲ್ಲಿ ಹಲವು ಮಂದಿ ಪೊಲೀಸರ ಪ್ರತಿರೋಧದಿಂದ ಅಂಗವಿಕಲರಾಗಿರುವುದಲ್ಲದೇ ಜೀವ ಕಳೆದುಕೊಂಡಿದ್ದಾರೆ. ಮೀಸಲಾತಿ ಜಾರಿಗಾಗಿ ಇದೀಗ ಬೀದರ್‌ನಿಂದ ಕ್ರಾಂತಿಕಾರಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ಮೊದಲ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುವುದಾಗಿ ಹೇಳಿದ ರಾಜ್ಯ ಸರ್ಕಾರ ಇಂದು ಮಾತು ತಪ್ಪಿದೆ. ಅಲ್ಲದೇ ಸದಾಶಿವ ಆಯೋಗ ನೀಡಿದ ವರದಿಯಲ್ಲಿ ಇಲ್ಲ ಸಲ್ಲದ ನೆಪ ಹೇಳಿಕೊಂಡು ಮೀಸಲಾತಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.
ದತ್ತಾಂಶದ ನೆಪ ಹೇಳುವ ರಾಜ್ಯ ಸರ್ಕಾರಕ್ಕೆ ಹವನೂರು, ಕಾಂತರಾಜು, ಸದಾಶಿವ, ಮಹದೇವಸ್ವಾಮಿ ಆಯೋಗಗಳ ವರದಿಯಿದ್ದರೂ ಮೀಸಲಾತಿ ಜಾರಿ ಮಾಡಲು ಮುಂದಾಗಿಲ್ಲ, ಇದೀಗ ನಾಗಮೋಹನ್‌ದಾಸ್ ಅವರ ಮಧ್ಯಂತರ ವರದಿಯ ಪರಿಶೀಲನೆಗೆ ಮುಂದಾಗಿದೆ. ಮಧ್ಯಂತರ ವರದಿ ಸಲ್ಲಿಸಿರುವ ನಾಗಮೋಹನ್‌ದಾಸ್ ಅವರು ಕಾಲಾವಕಾಶ ಕೇಳಿ ಸಲ್ಲಿಸಿರುವುದು ಸರಿಯಾದ ನಡೆಯಲ್ಲ ಎಂದು ಕಿಡಿಕಾರಿದರು.
2024ರ ಅಕ್ಟೋಬರ್‌ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಜಾರಿಯಾಗುವವರಗೆ ಬಡ್ತಿ ನೀಡಬಾರದು ಎಂದು ನಿರ್ಣಯ ಕೈಗೊಂಡು, ಮುಂದಿನ ತಿಂಗಳು ನಡೆಯುವ ಸಂಪುಟ ಸಭೆಗೂ ಮುನ್ನ 70ಕ್ಕೂ ಹೆಚ್ಚು ಬಡ್ತಿ ಮಾಡಿ, ಉನ್ನತ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಒಳಮೀಸಲಾತಿಗಾಗಿ ಕಾಯುತ್ತಿರುವ ಸಮುದಾಯಗಳಿಗೆ ಅದೇ ಸಮುದಾಯದವರೇ ಆದ ಸಚಿವ ಎಚ್.ಸಿ.ಮಹದೇವಪ್ಪ ಅನ್ಯಾಯ ಮಾಡುತ್ತಿದ್ದು, ಸಮುದಾಯದ ಪರ ನಿಲ್ಲದ ಸಮುದಾಯದ ಸಚಿವರುಗಳು ನಾಲಾಯಕ್ ಎಂದು ಕ್ರೋಧ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಸಿ.ಕೆ.ಪಾಪಯ್ಯ, ಸಿ.ಅಂದಾನಿ, ಬಿ.ಕೃಷ್ಣ, ಮಂಜು, ಶ್ರೀನವಾಸ್, ಶಿವಕುಮಾರ್ ಇತರರಿದ್ದರು.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…