ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಆರಂಭಿಸುವಂತೆ ಒತ್ತಾಯ

ಮಂಡ್ಯ : ಜಿಲ್ಲೆಯಲ್ಲಿ ಕೋಮು ಸೌಹಾರ್ಧತೆ ಕದಡುವಂತಹ ಕೃತ್ಯಗಳನ್ನು ನಿಯಂತ್ರಿಸಲು ಮಂಗಳೂರು ಮಾದರಿಯಲ್ಲಿ ‘ಕೋಮು ಹಿಂಸೆ ನಿಗ್ರಹ ಪಡೆ’ ಆರಂಭಿಸುವಂತೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು.

ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಕೋಮು ಸಂಘರ್ಷಗಳಿಗೆ ಎಡೆ ಮಾಡಿಕೊಡುವ ಪ್ರಯೋಗಗಳು ನಡೆಯುತ್ತಿವೆ. ಬಿಜೆಪಿ, ಸಂಘ ಪರಿವಾರ ಹಾಗೂ ಹಿಂದೂ ಸಂಘಟನೆಗಳು ಕೋಮು ವಿಷಬೀಜ ಬಿತ್ತಿ, ಜಿಲ್ಲೆಯಲ್ಲಿ ನೆಲೆ ನಿಲ್ಲುವ ಪ್ರಯತ್ನ ನಡೆಸುತ್ತಿವೆ. ಇದಕ್ಕೆ ಸರ್ಕಾರ ಈಗಲೇ ಕಠಿಣ ಕ್ರಮ ಕೈಗೊಂಡು ಪೂರ್ಣ ವಿರಾಮ ಹಾಕಬೇಕಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮದ್ದೂರು ಕಲ್ಲು ತೂರಾಟ ಪ್ರಕರಣ ನಡೆದಿರುವುದು ಖಂಡನಾರ್ಹ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆಯ ನಂತರ ಕರ್ಫ್ಯೂ ಇದ್ದರೂ ಕಾನೂನು ಮೀರಿ ಪ್ರತಿಭಟನೆ ನಡೆಸಿದವರು ಹಾಗೂ ರಾಮ್‌ರಹೀಂ ನಗರದ ಮಸೀದಿಗೆ ನುಗ್ಗುತ್ತೇವೆ ಎಂದವರನ್ನು ಬಂಽಸಬೇಕು ಎಂದು ಆಗ್ರಹಿಸಿದರು.

ಈ ಬಾರಿ ನಾಗಮಂಗಲದಲ್ಲಿ ಕ್ರಮಕೈಗೊಂಡ ರೀತಿ ಎಚ್ಚರ ವಹಿಸಿದ್ದರೆ, ಮದ್ದೂರಲ್ಲಿ ಗಲಭೆ ನಡೆಯುತ್ತಿರಲಿಲ್ಲ. ಜಿಲ್ಲಾ ಉಸ್ತುವಾರಿ ಮಂತ್ರಿ, ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ಘಟನೆಯ ಹೊಣೆ ಹೊರಬೇಕು ಎಂದು ಹೇಳಿದರು.

ರಾಜ್ಯಲ್ಲಿ ಕಾಂಗ್ರೆಸ್ ಒಂದು ಸಮುದಾಯವನ್ನು ಓಲೈಸುವ ವಿಕೃತ ಮನಸ್ಥಿತಿಯನ್ನು ಹೊಂದಿದೆ. ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿ, ಮೈಸೂರಿನ ಉದಯಗಿರಿ ಗಲಭೆ ಪ್ರಕರಣಗಳಲ್ಲಿ ಬಂಧಿತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿರುವುದು ಸರಿಯಲ್ಲ. ಒಂದು ಸಮುದಾಯದ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದು ರಾಜ್ಯದಲ್ಲಿ ಕುಕೃತ್ಯಗಳಿಗೆ ಪ್ರಚೋದನೆ ನೀಡಿದಂತಾಗಿದೆ ಎಂದು ಖಂಡಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎಸ್.ಶಿವಶಂಕರ್, ಮದ್ದೂರು ತಾಲ್ಲೂಕು ಅಧ್ಯಕ್ಷ ಶಂಕರ್, ಮಳವಳ್ಳಿ ತಾಲ್ಲೂಕು ಅಧ್ಯಕ್ಷ ವಿ.ನಂಜುಂಡಸ್ವಾಮಿ, ಬಸವರಾಜು, ದೇವರಾಜು ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

7 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

8 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

8 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

8 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

9 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

9 hours ago