ಮಂಡ್ಯ: ಮಿಮ್ಸ್‌ನ ಪ್ರಭಾರ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರು ಕರ್ತವ್ಯ ವೇಳೆಯಲ್ಲಿ ಅಧಿಕಾರ ದುರುಪಯೋಗ, ಕರ್ತವ್ಯಲೋಪ ಎಸಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್‍ಸ್‌ನ ರಾಜ್ಯಾಧ್ಯಕ್ಷ ಹೆಚ್.ಜಿ.ಗಂಗರಾಜು ಒತ್ತಾಯಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾರ ನಿರ್ದೇಶಕರಾಗಿ ಮಿಮ್ಸ್‌ನಲ್ಲಿ ಅಧಿಕಾರ ವಹಿಸಿರುವ ಡಾ.ನರಸಿಂಹಸ್ವಾಮಿ ಅಧಿಕಾರ ಬಳಸಿಕೊಂಡು ಸರಿಯಾದ ಸಮಯಕ್ಕೆ ಕಛೇರಿಗೆ ಆಗಮಿಸದೇ ಲೋಪವೆಸಗುತ್ತಿದ್ದಾರೆ. ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರು ಆಗಿರುವ ಇವರ ನಿರ್ಲಕ್ಷ್ಯತನದಿಂದಾಗಿ ವ್ಯಕ್ತಿಯೊಬ್ಬ ಸದರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವ ಘಟನೆಯೂ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಮಿಮ್ಸ್ ಆವರಣದಲ್ಲಿಯೇ ಅಧಿಕಾರಿಗಳಿಗೆ ತಂಗಲು ವಸತಿ ಗೃಹ ನಿರ್ಮಿಸಲಾಗಿದ್ದು, ಇದಕ್ಕೆ ೨೫ ಸಾವಿರ ರೂ.ಗಳಿಗೂ ಹೆಚ್ಚು ಪಾವತಿಮಾಡುವುದನ್ನು ತಪ್ಪಿಸಲು ವಸತಿಗೃಹದಲ್ಲಿ ವಾಸವಿರದೇ ಮೈಸೂರಿನಿಂದ ಮಂಡ್ಯಕ್ಕೆ ಬರುವುದರಿಂದಾಗಿ ಕರ್ತವ್ಯ ಲೋಪವಾಗುತ್ತಿದೆ ಎಂದು ದೂರಿದರು.
ಜಿಲ್ಲಾಡಳಿತ ಕೂಡಲೇ ಇವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಕರ್ನಾಟಕ ಸಮ ಸಮಾಜದ ರಾಜ್ಯಾಧ್ಯಕ್ಷ ಹೆಚ್.ಎನ್.ನರಸಿಂಹಮೂರ್ತಿ, ಭಾರತೀಯ ಬುದ್ಧ ಫೌಂಡೇಷನ್‌ನ ಜೆ.ರಾಮಯ್ಯ, ಸಮಸಮಾಜದ ಸದಸ್ಯರಾದ ಚೌದರಿ, ಲೋಕೇಶ್, ಪ್ರದೀಪ್, ಭಾಸ್ಕರ್ ಇದ್ದರು.
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…