ಮಂಡ್ಯ

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ 35 ಗ್ರಾಮ ಆಡಳಿತಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನಾ ಪತ್ರ ನೀಡಿದರು.

ಜಮೀನಿನ ಪೌತಿ ಖಾತೆ ಪ್ರಕ್ರಿಯೆಯನ್ನು ತಾವು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ನಿಗದಿತ ಸಮಯದಲ್ಲಿ ಕೆಲಸ ಮಾಡಿದ ಗ್ರಾಮ ಆಡಳಿತಾಧಿಕಾರಿಗಳಿಗೆ ಜನಪರ ಸೇವೆ ಮತ್ತು ಕರ್ತವ್ಯ ನಿಷ್ಠೆಗೆಯ ಶ್ಲಾಘನೆ ವ್ಯಕ್ತಪಡಿಸಿದರು.

ಮೃತರ ಹೆಸರಿನಲ್ಲಿರುವ ಜಮೀನುಗಳನ್ನು ವಾರಸುದಾರರಿಗೆ ಖಾತೆ ಮಾಡಿಕೊಡುವ ‘ಇ–ಪೌತಿ’ ಖಾತೆ ಆಂದೋಲನ ತ್ವರಿತ ಗತಿಯಲ್ಲಿ ಸಾಗಬೇಕು ಎಂದು ಅವರು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.

ಸರ್ಕಾರದ ಸೂಚನೆಗಳನ್ನು ಪಾಲಿಸಬೇಕು. ಜನರನ್ನು ಕಚೇರಿಗಳಿಗೆ ಅಲೆದಾಡಿಸುವ ಪ್ರವೃತ್ತಿ ಸರಿಯಲ್ಲ. ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಖಾತೆ ಮಾಡುವಾಗ ತಾಂತ್ರಿಕ ಸಮಸ್ಯೆ ಎದುರಾದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಉಪ ವಿಭಾಗಧಿಕಾರಿಗಳಾದ ಎಂ. ಶಿವಮೂರ್ತಿ, ಪಾಂಡವಪುರ ಉಪ ವಿಭಾಗಧಿಕಾರಿ ಶ್ರೀನಿವಾಸ್ ಹಾಗೂ ಎಲ್ಲಾ ತಾಲ್ಲೂಕಿನ ತಹಶೀಲ್ದಾರ್ ಉಪಸ್ಧಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

10 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

10 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

11 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

12 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

12 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

13 hours ago