Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಮಂಡ್ಯ| ಅ.23ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಡ್ಯ:  2024-25 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 23 ರಂದು ಮಂಡ್ಯ ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಮಟ್ಟದ ಯುವಜನೋತ್ಸವ ಸ್ಫರ್ಧೆಗಳಾದ ಜನಪದ ನೃತ್ಯ, ಜನಪದ ಗೀತೆ, ಕವಿತೆ ಬರೆಯುವುದು, ಕಥೆ ಬರೆಯುವುದು, ಚಿತ್ರಕಲೆ ಮುಂತಾದವುಗಳನ್ನು ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿನ ಎಲ್ಲಾ ಆಸಕ್ತ ಯುವಕ/ಯುವತಿಯರು, ಯುವಕ ಯುವತಿ ಮಂಡಳಿಗಳು, ಸಂಘ ಸಂಸ್ಥೆಗಳು ಅಕ್ಟೋಬರ್ 23 ರಂದು ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಕಡ್ಡಾಯವಾಗಿ ವಾಸಸ್ಥಳ ಮತ್ತು ವಯಸ್ಸಿನ ಧೃಡೀಕರಣ ಪತ್ರದೊಂದಿಗೆ ಆಗಮಿಸಿ ಹೆಸರು ನೋಂದಾಯಿಸಿಕೊಂಡು ಶಿಸ್ತು, ಬದ್ದತೆಗಳಿಂದ ಭಾಗವಹಿಸುವುದು.

ಎಲ್ಲಾ ಸ್ಫರ್ಧೆಗಳಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಸ್ಫರ್ಧೆಗಳಲ್ಲಿ ವಿಜೇತರಾದವರು ರಾಜ್ಯಮಟ್ಟದಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ವಿಜೇತರಾದವರು ರಾಷ್ಟಮಟ್ಟದಲ್ಲಿ ಪಾಲ್ಗೊಳ್ಳುವ ಅವಕಾಶವಿರುತ್ತದೆ. ವಿಜೇತ ಸ್ಪರ್ಧಿಗಳು ನಗದು ಬಹುಮಾನಕ್ಕಾಗಿ ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟದ ಜೆರಾಕ್ಸ್ ಪ್ರತಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: