ಮಂಡ್ಯ : ಕೇಂದ್ರ ಸಚಿವರಾದ ಬಳಿಕ ಎಚ್ ಡಿ ಕುಮಾರಸ್ವಾಮಿ ಅವರು ಮೊದಲ ಬಾರಿ ಮಂಡ್ಯ ಜಿಲ್ಲೆಯಲ್ಲಿ ಜನತಾ ದರ್ಶನ ನಡೆಸಿದರು. ಆದರೆ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಮುಜುಗರಕ್ಕೆ ಒಳಗಾದ ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿರುದ್ಧ ಕಿಡಿಕಾರಿದ ಎಚ್ಡಿಕೆ, ಜಿಲ್ಲಾಧಿಕಾರಿಗಳಿಗೆ ಕಾರ್ಯಕ್ರಮಕ್ಕೆ ಹಾಜರಾಗಲು ನಾನು ಮನವಿ ಮಾಡಿದ್ದೆ. ಜನತಾ ದರ್ಶನ ಕಾರ್ಯಕ್ರಮಕ್ಕೆ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ಹೊರಡಿಸಿದೆ. ಕ್ಯಾಬಿನೆಟ್ ನಲ್ಲಿ ಸಿಎಂ, ಸಚಿವರಿಗಷ್ಟೇ ಮಾತ್ರ ಜನತಾ ದರ್ಶನ ಮಾಡುವ ಅಧಿಕಾರವಿದೆ ಎಂದು ಸುತ್ತೋಲೆ ಹೊರಡಿಸಿದೆ. ಅಧಿಕಾರಿಗಳಿಗೂ ಕೂಡ ಈಗಾಗಲೇ ಈ ಕುರಿತು ಸೂಚನೆ ನೀಡಲಾಗಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಟ್ಟು ಹೊರಹಾಕಿದರು.
ಅಲ್ಲದೆ ಡಿ.ಕೆ ಸುರೇಶ್ ಸಂಸದರಾಗಿದ್ದ ಸಂದರ್ಭದಲ್ಲಿ ರಾಮನಗರದಲ್ಲಿ ಡಿಸಿ ಕಚೇರಿಯಲ್ಲಿ ಸಭೆ ಮಾಡಿದ್ರು. ಜನಸ್ಪಂದನಾ ಹೆಸರಿನಲ್ಲಿ ಹಳ್ಳಿ ಹಳ್ಳಿ ಸುತ್ತಿಸಿದ್ದರು. ಉಸ್ತುವಾರಿ ಸಚಿವರು ಮಾಡಬೇಕಾದ ಕೆಲಸವನ್ನು ಡಿಕೆ ಸುರೇಶ್ ಮಾಡಿದ್ದರು. ಅದಕ್ಕೆ ಅನುಮತಿ ಕೊಟ್ಟವರು ಯಾರು..? ಯಾವ ನಿಯಮವಿತ್ತು..? ಇವತ್ತು ಒಬ್ಬ ಕೇಂದ್ರ ಮಂತ್ರಿ ಜನರ ಬಳಿ ಅಹವಾಲು ಸ್ವೀಕರಿಸಲು ಬಂದಿದ್ದಾರೆ. ಆದರೆ ಹೊಸ ನಿಯಮಾವಳಿಯ ಮೂಲಕ ಇದನ್ನ ತಡೆಯಲು ಮುಂದಾಗಿದ್ದಾರೆ. ಇದು ನನ್ನ ಮನೆಯ ಕೆಲಸವಲ್ಲ. ಇದರಿಂದ ಅವರಿಗೆ ಏನು ದೊರಕುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…