ಮಂಡ್ಯ

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ ಪೂವನಹಳ್ಳಿ ಆಯ್ಕೆ

ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ

18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ

ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಕೌಶಲ್ಯಾಭಿವೃದ್ಧಿ ಸೇರಿ ಇನ್ನೂ ಅನೇಕ ಕಾರ್ಯಕ್ರಮ

ಹೊಸದಿಲ್ಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್‌ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ.

ಈ ವಿಷಯವನ್ನು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಹಾಗೂ ಈ ಯೋಜನೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಸಮರೋಪದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಗಂಜಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪೂವನಹಳ್ಳಿ ಗ್ರಾಮವನ್ನು ಪಿಎಂ ಜನ್ ಮನ್ ಯೋಜನೆಗೆ ಪರಿಗಣಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ ವರ್ಷ ಈ ಯೋಜನೆಯನ್ನು ಘೋಷಿಸಿ ಬುಡಕಟ್ಟು ಸಮುದಾಯದ ಜನರು ವಾಸವಿರುವ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಣೆ ಮಾಡಿದ್ದರು.

79,000 ಕೋಟಿಗಳ ಈ ಬೃಹತ್ ಯೋಜನೆಯ ಮೂಲಕ ದೇಶದ 63,000 ಹಳ್ಳಿಗಳನ್ನು ಆಮೂಲಾಗ್ರವಾಗಿ ಅಭಿವೃದ್ದಿ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಕೌಶಲ್ಯಾಭಿವೃದ್ಧಿ ಸೇರಿದಂತೆ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮಗಳನ್ನು 18 ಇಲಾಖೆಗಳು ಅನುಷ್ಠಾನಕ್ಕೆ ತರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಪಿಆರ್‌ಡಿಐ ಮೂಲಕ ಮನೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಆರೋಗ್ಯ, ಪೌಷ್ಠಿಕಾಂಶ ಹೆಚ್ಚಿಸುವ ಜತೆಗೆ ರಸ್ತೆ, ದೂರ ಸಂಪರ್ಕ ಸುಸ್ಥಿರ ಜೀವನಾವಕಾಶಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದಿವಾಸಿಗಳ ಗುಡಿ ಕೈಗಾರಿಕೆಗಳ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಯೋಜನೆಗೆ ಯಾವುದೇ ಗ್ರಾಮವನ್ನು ಯಾಕೆ ಮಾಡಬೇಕಾದರೆ ಹಲವಾರು ಮಾನದಂಡಗಳನ್ನು ಬುಡಕಟ್ಟು ಸಚಿವಾಲಯ ನಿಗದಿ ಮಾಡಿದೆ. ಆ ಮಾನದಂಡಕ್ಕೆ ಅನುಗುಣವಾಗಿ ಗ್ರಾಮಗಳನ್ನು ಆಯ್ಕೆ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನವಾಗಿ ಮಾನದಂಡಗಳ ಅನುಗುಣವಾಗಿ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಆಗಿದ್ದು, ಅತ್ಯಂತ ಬದ್ಧತೆಯಿಂದ ಅನುಷ್ಠಾನ ಮಾಡಲಾಗುತ್ತಿದೆ. ಮೊದಲಿಗೆ ಪೂವನಹಳ್ಳಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಳ್ಳಿಗಳನ್ನು ಈ ಯೋಜನೆ ವ್ಯಾಪ್ತಿಗೆ ತರಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

39 mins ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

1 hour ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

1 hour ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

2 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

3 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

3 hours ago