Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮಂಡ್ಯ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ ಸ್ವಚ್ಚಗೊಳಿಸುವ ಅಭಿಯಾನ

ಮಂಡ್ಯ:  ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರಿ ಓರ್ವ ಸಾವು, ೯೦  ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ  ಸಿದ್ದರಾಮಯ್ಯ ಬುಧವಾರ(ಮೇ.22) ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಸಿಇಒಗಳ ಸಭೆ ನಡೆಸಿ ಅಧಿಕಾರಿಗಳಿ ವಾರ್ನಿಂಗ್‌  ಮಾಡಿ, ಕುಡಿಯುವ ನೀರಿನ ಸಮಸ್ಯೆಗೆಳಿಗೆ ಸಿಇಒಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಎಚ್ಚೆತ್ತಾ ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ನೀರಿನ ಟ್ಯಾಂಕರ್‌ಗಳನ್ನು ಸ್ಚಚ್ಚಗೊಳಿಸುವ ಅಭಿಯಾನವನ್ನು ಹಮ್ಮಿಕೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯತ್‌ ಸಿಇಒ ಶೇಖ್‌ ತನ್ವೀರ್‌ ಆಸಿಫ್‌ ,  ಕುಡಿಯುವ ನೀರು ಸಂಗ್ರಾಹಿಸುವ ಟ್ಯಾಂಕ್ ಗಳು,  ಟ್ಯಂಕ್ ಗಳ ಸುತ್ತ ಇರುವ ಪ್ರದೇಶ, ಒಳಚರಂಡಿ ಪ್ರದೇಶಗಳನ್ನು ಸ್ವಚ್ಛ ಗೊಳಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನೀರು ಸಂಗ್ರಹಿಸುವ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಬೇಕು. ಕುಡಿಯುವ ನೀರಿನ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ ಕುಡಿಯಲು ಯೋಗ್ಯವಾದ ನೀರನ್ನು ಸಾರ್ವಜನಿಕರಿಗೆ ಒದಗಿಸಬೇಕು ಎಂದು  ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.

Tags: