ಮಂಡ್ಯ: ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರಿ ಓರ್ವ ಸಾವು, ೯೦ ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ ಬುಧವಾರ(ಮೇ.22) ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆ ನಡೆಸಿ ಅಧಿಕಾರಿಗಳಿ ವಾರ್ನಿಂಗ್ ಮಾಡಿ, ಕುಡಿಯುವ ನೀರಿನ ಸಮಸ್ಯೆಗೆಳಿಗೆ ಸಿಇಒಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಎಚ್ಚೆತ್ತಾ ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ನೀರಿನ ಟ್ಯಾಂಕರ್‌ಗಳನ್ನು ಸ್ಚಚ್ಚಗೊಳಿಸುವ ಅಭಿಯಾನವನ್ನು ಹಮ್ಮಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ವೀರ್ ಆಸಿಫ್ , ಕುಡಿಯುವ ನೀರು ಸಂಗ್ರಾಹಿಸುವ ಟ್ಯಾಂಕ್ ಗಳು, ಟ್ಯಂಕ್ ಗಳ ಸುತ್ತ ಇರುವ ಪ್ರದೇಶ, ಒಳಚರಂಡಿ ಪ್ರದೇಶಗಳನ್ನು ಸ್ವಚ್ಛ ಗೊಳಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನೀರು ಸಂಗ್ರಹಿಸುವ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಬೇಕು. ಕುಡಿಯುವ ನೀರಿನ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ ಕುಡಿಯಲು ಯೋಗ್ಯವಾದ ನೀರನ್ನು ಸಾರ್ವಜನಿಕರಿಗೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…