ಮಂಡ್ಯ

ಮಂಡ್ಯ: ಟ್ರಾಕ್ಟರ್‌ನಿಂದ ಬಿದ್ದು ಚಾಲಕ ಸಾವು

ಮಂಡ್ಯ: ಟ್ರಾಕ್ಟರ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೆಇಬಿ ಕಚೇರಿ ಮುಂಭಾಗ ಮಂಗಳವಾರ ನಡೆದಿದೆ.

ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಕುಮಾರ (48) ಎಂಬುವರೇ ಮೃತಪಟ್ಟ ದುರ್ದೈವಿ.

ರಾಗಿಮುದ್ದನಹಳ್ಳಿ ಗ್ರಾಮದಿಂದ ಮಂಡ್ಯಕ್ಕೆ ಬರುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೆ ಹತ್ತಿದೆ. ಇದರಿಂದ ಗಾಬರಿಗೊಂಡ ಕುಮಾರ ಟ್ರಾಕ್ಟರ್‌ನಿಂದ ಜಿಗಿದು ಪಾರಾಗಲು ಯತ್ನಿಸಿದ್ದಾರೆ. ಈ ವೇಳೆ ಟ್ರಾಕ್ಟರ್‌ನ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

12 mins ago

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

3 hours ago

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

4 hours ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

4 hours ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

4 hours ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

4 hours ago