ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯ ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ. ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮೈಸೂರಿನ ನಾಗನಹಳ್ಳಿ ಗ್ರಾಮದ ಎಸ್.ಶ್ರೇಯಸ್ ಎಂಬುದಾಗಿ ಗುರುತಿಸಲಾಗಿದ್ದು, ಮಂಡ್ಯ ಜಿಲ್ಲೆಯ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ. ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಬಲಮುರಿಗೆ ಈಜಲೆಂದು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮೃತ ಎಸ್.ಶ್ರೇಯಸ್ ಅವರೊಂದಿಗೆ ತೆರಳಿದ್ದ ಸ್ನೇಹಿತರು ಈಜಲು ಬಾರದ ಹಿನ್ನೆಲೆಯಲ್ಲಿ ಕಾವೇರಿ ನದಿ ದಡದಲ್ಲಿಯೇ ಕುಳಿತಿದ್ದರು. ಆದರೆ ಈಜಲು ಬರುತ್ತಿದ್ದ ಕಾರಣ ಮೃತ ಶ್ರೇಯಸ್ ಏಕಾಂಗಿಯಾಗಿ ಈಜಲು ನದಿಗಿಳಿದ್ದರು. ಈ ಸಂದರ್ಭದಲ್ಲಿ ಬಲಮುರಿಯ ಕಾವೇರಿ ನದಿಯಲ್ಲಿರುವ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಕುರಿತು ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…