Mandya | E-Pauti Khata Movement Begins in the District
ಮಂಡ್ಯ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತಾ ಆಂದೋಲನ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರು ಇನ್ನೂ ಮುಂದೆ ತಾಲ್ಲೂಕು ಕಚೇರಿಗೆ ಅಲೆದಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈಗಾಗಲೇ ಗದಗ ಜಿಲ್ಲೆಯಲ್ಲಿ ಪೈಲೆಟ್ ಪ್ರಾಜೆಕ್ಟ್ ಆಗಿ ಕಳೆದ ಎರಡು ತಿಂಗಳಿಂದ ಈ ಪೌತಿ ಖಾತೆ ಕೆಲಸ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ಕೃಷಿ ಜಮೀನಿನ ಸ್ವಂತ ಇಡುವಳಿದಾರರು/ ಖಾತೆದಾರರು ಮೃತಗೊಂಡ ನಂತರ ಹಲವಾರು ವರ್ಷಗಳಿಂದ ವರಸುದಾರರು ತಮ್ಮ ಹೆಸರಿಗೆ ಖಾತೆಯನ್ನು ವರ್ಗಾವಣೆ ಮಾಡಿಕೊಂಡಿರುವುದಿಲ್ಲ. ಆದರಿಂದ ಪಹಣಿಗಳಲ್ಲಿ ಮೃತ ಖಾತೆದಾರರ ಹೆಸರು ಮುಂದುವರೆಯುತ್ತಿದೆ. ಇದನ್ನು ಸರಿಪಡಿಸಲು ಕಂದಾಯ ಇಲಾಖೆ ಸ್ವಯಂ ಪ್ರೇರಿತವಾಗಿ ಇ- ಖಾತಾ ಆಂದೋಲವನ್ನು ಪ್ರಾರಂಭಿಸಿದೆ ಎಂದರು.
ಕಂದಾಯ ಇಲಾಖೆಯಿಂದ ಇತ್ತೀಚೆಗೆ ಪಹಣಿಗಳನ್ನು ಆಧಾರ ಜೋಡಣೆ ಮಾಡುವ ಸಂದರ್ಭದಲ್ಲಿ ಮೃತ ಖಾತೆದಾರರನ್ನು ಪತ್ತೆ ಹಚ್ಚಿ ವಿವರವನ್ನು ನಮೂದು ಮಾಡಲಾಗಿದೆ. ತಂತ್ರಾಂಶವನ್ನು ಬಳಸಿಕೊಂಡು ಇ-ಪೌತಿ ಖಾತೆ ಮಾಡಿಕೊಡಲಾಗುವುದು ಎಂದರು.
ಗ್ರಾಮ ಆಡಳಿತಾಧಿಕಾರಿಗಳು ನಿಖರ ಮಾಹಿತಿಗಳೊಂದಿಗೆ ತಂತ್ರಾಂಶದಲ್ಲಿ ವರಸುದಾರರು ಹಾಗೂ ಮೃತ ಖಾತೆದಾರರ ವಿವರವನ್ನು ಭರ್ತಿ ಮಾಡಬೇಕಿದ್ದು, ಸಾರ್ವಜನಿಕರು ಮೃತ ಖಾತೆದಾರರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ಆಧಾರ್ ವಿವರವನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನೀಡಿ ಸಹಕರಿಸಬೇಕು ಎಂದರು.
ಗ್ರಾಮ ಆಡಳಿತಾಧಿಕಾರಿಗಳ ಕೆಲಸ ಪ್ರಮುಖವಾಗಿದ್ದು, ಈಗಾಗಲೇ ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಇ.ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಲ್ಯಾಪ ಟಾಪ್ ನೀಡಲಾಗಿದ್ದು, ಇ- ಪೌತಿ ಖಾತಾ ಆಂದೋಲನಕ್ಕೆ ಬಳಸಿಕೊಳ್ಳಿ . ಇ-ಪೌತಿ ಖಾತಾ ಆಂದೋಲನದ ಬಗ್ಗೆ ತಾತ್ಸಾರ ಹಾಗೂ ನಿರ್ಲಕ್ಷ್ಯ ಮನೋಭಾವನೆ ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಇ- ಪೌತಿ ಖಾತೆ ವೆಬ್ ಅಪ್ಲಿಕೇಷನ್ ನಲ್ಲಿ ಭರ್ತಿ ಮಾಡಬೇಕಿರುವ ವಿವರಗಳ ಕುರಿತು ಆನ್ ಲೈನ್ ಮುಖಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮ ಆಡಳಿತಾಧಿಕಾರಿಗಳಿಗೆ ತರಬೇತಿ ನೀಡಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿ.ಡಿಎಲ್. ಆರ್ ವಿರೂಪಾಕ್ಷ, ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…