ಮಂಡ್ಯ

ಮಂಡ್ಯ | ಇ-ಪೌತಿ ಖಾತೆ ಆಂದೋಲನ ಜಿಲ್ಲೆಯಲ್ಲೂ ಆರಂಭ

ಮಂಡ್ಯ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತಾ ಆಂದೋಲನ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರು ಇನ್ನೂ ಮುಂದೆ ತಾಲ್ಲೂಕು ಕಚೇರಿಗೆ ಅಲೆದಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈಗಾಗಲೇ ಗದಗ ಜಿಲ್ಲೆಯಲ್ಲಿ‌ ಪೈಲೆಟ್ ಪ್ರಾಜೆಕ್ಟ್ ಆಗಿ ಕಳೆದ ಎರಡು ತಿಂಗಳಿಂದ ಈ ಪೌತಿ ಖಾತೆ ಕೆಲಸ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಗ್ರಾಮ‌ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಕೃಷಿ ಜಮೀನಿನ ಸ್ವಂತ ಇಡುವಳಿದಾರರು/ ಖಾತೆದಾರರು ಮೃತಗೊಂಡ ನಂತರ ಹಲವಾರು ವರ್ಷಗಳಿಂದ ವರಸುದಾರರು ತಮ್ಮ ಹೆಸರಿಗೆ ಖಾತೆಯನ್ನು ವರ್ಗಾವಣೆ ಮಾಡಿಕೊಂಡಿರುವುದಿಲ್ಲ. ಆದರಿಂದ ಪಹಣಿಗಳಲ್ಲಿ ಮೃತ ಖಾತೆದಾರರ ಹೆಸರು ಮುಂದುವರೆಯುತ್ತಿದೆ. ಇದನ್ನು ಸರಿಪಡಿಸಲು ಕಂದಾಯ ಇಲಾಖೆ ಸ್ವಯಂ ಪ್ರೇರಿತವಾಗಿ ಇ- ಖಾತಾ ಆಂದೋಲವನ್ನು ಪ್ರಾರಂಭಿಸಿದೆ ಎಂದರು.

ಕಂದಾಯ ಇಲಾಖೆಯಿಂದ ಇತ್ತೀಚೆಗೆ ಪಹಣಿಗಳನ್ನು ಆಧಾರ ಜೋಡಣೆ ಮಾಡುವ ಸಂದರ್ಭದಲ್ಲಿ ಮೃತ ಖಾತೆದಾರರನ್ನು ಪತ್ತೆ ಹಚ್ಚಿ ವಿವರವನ್ನು ನಮೂದು‌ ಮಾಡಲಾಗಿದೆ. ತಂತ್ರಾಂಶವನ್ನು ಬಳಸಿಕೊಂಡು ಇ-ಪೌತಿ ಖಾತೆ ಮಾಡಿಕೊಡಲಾಗುವುದು ಎಂದರು.

ಗ್ರಾಮ ಆಡಳಿತಾಧಿಕಾರಿಗಳು ನಿಖರ ಮಾಹಿತಿಗಳೊಂದಿಗೆ ತಂತ್ರಾಂಶದಲ್ಲಿ ವರಸುದಾರರು ಹಾಗೂ ಮೃತ ಖಾತೆದಾರರ ವಿವರವನ್ನು ಭರ್ತಿ ಮಾಡಬೇಕಿದ್ದು, ಸಾರ್ವಜನಿಕರು ಮೃತ ಖಾತೆದಾರರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ಆಧಾರ್ ವಿವರವನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನೀಡಿ‌ ಸಹಕರಿಸಬೇಕು‌ ಎಂದರು.

ಗ್ರಾಮ ಆಡಳಿತಾಧಿಕಾರಿಗಳ ಕೆಲಸ ಪ್ರಮುಖವಾಗಿದ್ದು, ಈಗಾಗಲೇ ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಇ.ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಲ್ಯಾಪ ಟಾಪ್ ನೀಡಲಾಗಿದ್ದು, ಇ- ಪೌತಿ ಖಾತಾ ಆಂದೋಲನಕ್ಕೆ ಬಳಸಿಕೊಳ್ಳಿ . ಇ-ಪೌತಿ ಖಾತಾ ಆಂದೋಲನದ ಬಗ್ಗೆ ತಾತ್ಸಾರ ಹಾಗೂ ನಿರ್ಲಕ್ಷ್ಯ ಮನೋಭಾವನೆ ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇ- ಪೌತಿ ಖಾತೆ ವೆಬ್ ಅಪ್ಲಿಕೇಷನ್ ನಲ್ಲಿ ಭರ್ತಿ ಮಾಡಬೇಕಿರುವ ವಿವರಗಳ‌ ಕುರಿತು ಆನ್ ಲೈನ್ ಮುಖಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮ ಆಡಳಿತಾಧಿಕಾರಿಗಳಿಗೆ ತರಬೇತಿ ನೀಡಲಾಯಿತು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿ.ಡಿಎಲ್. ಆರ್ ವಿರೂಪಾಕ್ಷ, ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago