ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ ಸಲಹೆ ಮೇರೆಗೆ ಪಶು ವೈದ್ಯಕೀಯ ಶಿಕ್ಷಣ ಕಾಲೇಜು ತೆರೆಯಲು ರಾಜ್ಯ ಸರ್ಕಾರದಿಂದ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪದ್ಮಭೂಷಣ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ೮೧ನೇ ಜಯಂತ್ಯುತ್ಸವ ಹಾಗೂ ೧೩ನೇ ವರ್ಷದ ಸಂಸ್ಮರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ಪಶು ವೈದ್ಯಕೀಯ ವಿಜ್ಞಾನ ಕಾಲೇಜಿನ ಅವಶ್ಯವಿರುವ ಬಗ್ಗೆ ಶ್ರೀಗಳು ನನ್ನ ಗಮನಕ್ಕೆ ತಂದಿದ್ದು, ಸರ್ಕಾರದಲ್ಲಿ ಚರ್ಚಿಸಿ, ಜಿಲ್ಲೆಯಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ನಾನು ಕೃಷಿ ಸಚಿವನಾದ ಬಳಿಕ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಶಾಖಾ ಮಠಕ್ಕೆ ಕೃಷಿ ವಿಜ್ಞಾನ ಕಾಲೇಜು ಮಂಜೂರು ಮಾಡಲಾಗಿದ್ದು, ಇಲ್ಲಿ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳು ನಡೆಯುತ್ತಿವೆ. ಮಂಡ್ಯ ಜಿಲ್ಲೆ ಹೈನುಗಾರಿಕೆಯಲ್ಲಿ ಅಗ್ರ ಸ್ಥಾನದಲ್ಲಿರುವುದರಿಂದ ರಾಜ್ಯ ಸರ್ಕಾರದಿಂದ ಕಾಲೇಜು ತೆರಯಲು ಪ್ರಯತ್ನಿಸಲಾಗುವುದು ಎಂದರು.
ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕ ಸಿ.ಎನ್.ಅಶ್ವಥನಾರಾಯಣ್ ಮಾತನಾಡಿ, ನಾಡಿನ ಸಮಸ್ತ ಜನರಿಗೆ ಅನ್ನ, ಅಕ್ಷರ, ಆರೋಗ್ಯವನ್ನು ಬಿತ್ತಿ ಜನರ ಉದ್ಧಾರಕ್ಕೆ ಶ್ರಮಿಸಿದ ಸಂತ ಚುಂಚಶ್ರೀಗಳು. ಅವರ ತತ್ವ, ಆದರ್ಶ ಹಾಗೂ ಅವರ ಸಮಾಜ ಮುಖಿ ಕಾರ್ಯಗಳು ನಮಗೆ ಆದರ್ಶವಾಗಬೇಕು ಎಂದರು.
ಗುರುಗೆ ತಕ್ಕ ಶಿಷ್ಯರು ಶ್ರೀಗಳು
ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಶ್ರೀ ಮಠ ಹಾಗೂ ಶಿಕ್ಷಣ ಸಂಸ್ಥೆಗಳನ್ನು ಗುರುಗಳು ಹಾಕಿಕೊಟ್ಟಿರುವ ದಾರಿಯಲ್ಲಿ ಕೊಂಡೊಯ್ಯವ ಮೂಲಕ ನಾಡಿನ ಸಮಸ್ತ ಜನರ ಸೇವೆಯಲ್ಲಿ ನಿರತರಾಗಿದ್ದಾರೆ. ಶ್ರೀಗಳಲ್ಲಿನ ಧಾರ್ಮಿಕ ಹಾಗೂ ಸಮಾಜಿಕ ಕೆಲಸಗಳು ನಾಡಿನಾದ್ಯಂತ ಪ್ರಶಂಸನೀಯವಾಗಿವೆ ಎಂದು ಶ್ರೀಗಳ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದರು.
ಪುತ್ತಳಿಗೆ ಪುಷ್ಪಾರ್ಚನೆ
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ೮೧ನೇ ಜಯಂತ್ಯುತ್ಸವ ಹಾಗೂ ೧೩ನೇ ವರ್ಷದ ಸಂಸ್ಮರಣಾ ಮಹೋತ್ಸವದ ಅಂಗವಾಗಿ ವೇದಿಕೆಯಲ್ಲಿ ಶ್ರೀಗಳ ಕಂಚಿನ ಪುತ್ತಳಿಗೆ ಶ್ರೀಗಳು ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಿ, ಆಶೀರ್ವಚನ ನೀಡಿದರು.
ಚಿತ್ರದುರ್ಗ ಮಠದ ಮಾದಾರ ಚನಯ್ಯ ಸ್ವಾಮೀಜಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಬೆಂಗಳೂರು ಬಿಜಿಎಸ್ ಶಾಖಾ ಮಠದ ಪ್ರಕಾಶನಾಥ ಸ್ವಾಮೀಜಿ, ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಮಾಗಡಿ ಕ್ಷೇತ್ರದ ಶಾಸಕ ಬಾಲಕೃಷ್ಣ, ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ, ತುಮಕೂರು ಮಾಜಿ ಶಾಸಕ ನಿಂಗಪ್ಪ, ಪತ್ರಕರ್ತ ಸುದರ್ಶನ್ ಚನ್ನಂಗಿಹಳ್ಳಿ, ರಾಜ್ಯ ಮಾಹಿತಿ ಆಯುಕ್ತರಾದ ರಾಜಶೇಖರ್, ಜಿಲ್ಲಾಧಿಕಾರಿ ಡಾ.ಕುಮಾರ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ…
ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು…
ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ…
ಬೆಂಗಳೂರು : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ…
ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ…