ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ; ಭೂಸ್ವಾಧೀನಕ್ಕೆ ಎಚ್‌ಡಿಕೆ ಸೂಚನೆ

ಮಂಡ್ಯ : ಜಿಲ್ಲೆಯ ಜನರ ಅಭಿವೃದ್ಧಿಗಾಗಿ ನಾಗಮಂಗಲ ಅಥವಾ ಮಳವಳ್ಳಿ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಚಿಂತಿಸಲಾಗಿದೆ. ಅಧಿಕಾರಿಗಳು ಸೂಕ್ತ ಸರ್ಕಾರಿ ಜಾಗವನ್ನು ಗುರುತಿಸಿ ಭೂ ಸ್ವಾಧೀನ ಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಯಾಂಕ್‌ಗಳು ಜನಸಾಮಾನ್ಯರೊಂದಿಗೆ ಜನಸ್ನೇಹಿ ಸಂಬಂಧ ಇಟ್ಟುಕೊಳ್ಳಬೇಕು. ಜೊತೆಗೆ ರೈತರು ಸಾಲ ಮರುಪಾವತಿ ಮಾಡುವಂತೆ ಯಾವುದೇ ಬ್ಯಾಂಕ್‌ಗಳು ಒತ್ತಡ ಹೇರಬಾರದು. ಒತ್ತಡ ಏರುತ್ತಿರುವುದು ಗಮನಕ್ಕೆ ಬಂದರೆ, ಪರೀಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸದರಿ ವರ್ಷ ವಾಡಿಕೆಯಂತೆ ಮಳೆಯಾಗಿದ್ದು ಯಾವುದೇ ರೀತಿಯಲ್ಲಿ ನೀರಿನ ಸಮಸ್ಯೆ ಉದ್ಭವಿಸಿಲ್ಲ, ಒಪ್ಪಂದದ ಪ್ರಕಾರ ಸದರಿ ವರ್ಷ ತಮಿಳುನಾಡಿಗೆ ಹರಿಸಬೇಕಾದ ನೀರನ್ನು ಈಗಾಗಲೇ ಬಿಡಲಾಗಿದೆ, ನಮ್ಮ ಭಾಗದ ರೈತರ ವ್ಯವಸಾಯಕ್ಕೆ ಜುಲೈ ನಿಂದಲ್ಲೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

ಇದನ್ನು ಓದಿ: ಅರ್ಹ ಅಪೌಷ್ಟಿಕ ಮಕ್ಕಳಿಗೆ ಸವಲತ್ತು ತಲುಪಿಸಿ : ಮಕ್ಕಳ ಆಯೋಗದ ಅಧ್ಯಕ್ಷರ ಸೂಚನೆ

ಜಿಲ್ಲೆಯಲ್ಲಿ ವೃದ್ಧಾಪ್ಯ ವೇತನ, ಪಿಂಚಣಿ, ಅಂಗವಿಕಲರ ವೇತನ ಎಲ್ಲವೂ ಸರಿಯಾಗಿ ಅರ್ಹರ ಖಾತೆ ತಲುಪುತ್ತಿದೆ, ಜಿಲ್ಲೆಯಲ್ಲಿ ಒಟ್ಟು 2558 ಅಂಗನವಾಡಿಗಳು ಕಾರ್ಯ ನಿರ್ವಹಿಸುತ್ತಿವೆ, ಅಧಿಕಾರಿಗಳು ಮಕ್ಕಳಿಗೆ ಗರ್ಭಿಣಿಯಾರಿಗೆ ನೀಡಬೇಕಾದ ಸೌಲಭ್ಯಗಳು ಸರಿಯಾಗಿ ತಲುಪುತ್ತಿರುವ ಕುರಿತು ಪರಿಶೀಲನೆ ನಡೆಸಿ, ಪೋಷಣ್ ಅಭಿಯಾನ ಯೋಜನೆಯಡಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಮಂಡ್ಯ ಜಿಲ್ಲೆ ಪಡೆದಿದೆ ಎಂದು ಮಾಹಿತಿ ನೀಡಿದರು.

ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯಡಿ ಜಿಲ್ಲೆಯ 1838 ಶಾಲೆಗಳಿಗೆ ಮಧ್ಯಾಹ್ನದ ಊಟ ತಲುಪುತ್ತಿದೆ, ಸಿ.ಎಸ್. ಆರ್ ಫಂಡ್ ಮೂಲಕ ಮಿಮ್ಸ್ ಆಸ್ಪತ್ರೆಗೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು ಕಾರ್ಯ ಶುರು ಮಾಡಲಾಗಿದೆ ಎಂದು ತಿಳಿಸಿದರು.

ಅನೇಕ ಜನರು ಹನಕೆರೆ ಗೌಡಹಳ್ಳಿ ಹೆದ್ದಾರಿಯಲ್ಲಿ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ, ಹನಕೆರೆ ಗೌಡಹಳ್ಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ ದೊರೆತಿದೆ ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಬೇಕು, ಮುತ್ತತ್ತಿ ಹಲಗೂರು ಬಳಿ ಇದೆ ಸಮಸ್ಯೆ ಅಧಿಕಾರಿಗಳು ಮುತುವರ್ಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲೆಯಲ್ಲಿ 77 ನೊಂದಾಯಿತ ಕ್ರಷರ್ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ, ಅಕ್ರಮವಾಗಿ ಗಣಿಗಾರಿಕೆ ಅಥವಾ ಕ್ರಷಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸಿ, ಪಡಿತರ ಚೀಟಿ ಪರಿಷ್ಕರಣೆ ಮಾಡಿಸುತ್ತಿರುವ ಹಿನ್ನೆಲೆಯಲ್ಲಿ ಅನರ್ಹ ಬಿ.ಪಿ.ಎಲ್ ಕಾರ್ಡ್ ದಾರರನ್ನು ತೆಗೆದು ಹಾಕಿ ಯಾವುದೇ ಕಾರಣಕ್ಕೂ ಅರ್ಹ ಬಿ.ಪಿ.ಎಲ್ ಕಾರ್ಡ್ ಹೊಂದಿರುವವರನ್ನು ಕೈಬಿಡುವಂತಿಲ್ಲ ಅಧಿಕಾರಿಗಳು ಇದರ ಕಡೆ ಹೆಚ್ಚಿನ ಗಮನ ಹರಿಸಿ ಎಂದು ಹೇಳಿದರು.

ಪಶುಪಾಲನಾ ಇಲಾಖೆಯ ವತಿಯಿಂದ ಮೊದಲನೇ ಹಂತದ ಕಾಲುಬಾಯಿ ಜ್ವರ ಹಾಗೂ ಜಾನುವಾರಗಳ ಕಂದು ರೋಗಗಳಿಗೆ ಶೇ 100 ರಷ್ಟು ಲಸಿಕೆ ನೀಡಲಾಗಿದೆ, ಬೀದಿ ನಾಯಿ ಗಳ ಹಾವಳಿ ಹೆಚ್ಚಾಗಿದ್ದು 18000 ಸಾವಿರ ಬೀದಿ ನಾಯಿಗಳಿಗೆ ರೇಬಿಸ್ ವ್ಯಾಕ್ಸಿನೇಷನ್ ನೀಡಲಾಗಿದೆ, ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲು ಈಗಾಗಲೇ ಜಿಲ್ಲಾ ಮಟ್ಟ ಸಭೆ ನಡೆಸಲಾಗಿದೆ ಎಂದರು.

ಶಾಸಕ ಪಿ.ರವಿಕುಮಾರ್‌ ಮಾತನಾಡಿ, ವಿಸಿ ನಾಲೆಗಳಲ್ಲಿ ಅಪಘಾತ ಹೆಚ್ಚಳ ಪ್ರಕರಣಗಳು ಹೆಚ್ಚಾಗುತ್ತಿವೆ, ಅಧಿಕಾರಿಗಳು ತಡೆಗೋಡೆ ನಿರ್ಮಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲಿವರೆಗೆ 15ಕ್ಕೂ ಹೆಚ್ಚು ಸಾವು ಸಂಭವಿಸಿದೆ, ತಂಡ ರಚಿಸಿ ಎಲ್ಲೆಲ್ಲಿ ತಡೆಗೋಡೆ ಹಾಗೂ ರೋಡ್ ಹಂಪ್ ಅಗತ್ಯವಿದೆಯೋ ಅಂತಹ ಸ್ಥಳಗಳಲ್ಲಿ ತಡೆಗೋಡೆ ರೋಡ್ ಹಂಪ್ ನಿರ್ಮಾಣ ಮಾಡಲು 8 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸೂಚಿಸಿದರು.

ಇದನ್ನು ಓದಿ: ಮೈಸೂರು | ಒಳ ಮೀಸಲಾತಿ ಜಾರಿ ವಿಳಂಬ ಖಂಡಿಸಿ ನ.26ರಂದು ಜಾಥಾ

ಮುಖ್ಯ ರಸ್ತೆಗಳಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ, ನೀರಾವರಿ ಇಲಾಖೆಯ ಜಾಗ ಒತ್ತುವರಿ ಮಾಡಿಕೊಂಡು ಇರುವವರ ವಿರುದ್ಧ ಕ್ರಮ ಕೈಗೊಳ್ಳಿ, ಮಂಡ್ಯ ಮಹಾವೀರ ವೃತ್ತ ರೈಲ್ವೆ ಅಂಡರ್ ಪಾಸ್ ನಲ್ಲಿ ನೀರು ಸೋರಿಕೆ ಆಗುತ್ತಿದೆ ಅಧಿಕಾರಿಗಳು ಗಮನಹರಿಸಿ ಸರಿ ಪಡಿಸಿ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ ಕುಮಾರ ಮಾತನಾಡಿ, ಅಕ್ಟೋಬರ್ ನಲ್ಲಿ ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿದಿರುವುದರಿಂದ ಜಿಲ್ಲೆಯ ಕೆಲವು ಕಡೆ ಮನೆ, ಬೆಳೆ ಹಾನಿ ಸಂಭವಿಸಿದೆ, ಅಕ್ಟೋಬರ್ ಮಾಹೆಯಲ್ಲಿಯೇ 78 ಮನೆಗಳು ಹಾನಿಗೊಳಗಾಗಿದೆ. ದಸರಗುಪ್ಪೆ ಬಳಿ ಸಿ.ಡಿ ಎಸ್ ನಾಲೆ ಒಡೆದು ಸುಮಾರು 80 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿತ್ತು, ಹಾನಿಗೊಳಗಾದ ಬೆಳೆಗಳನ್ನು ಜಂಟಿ ಸಮೀಕ್ಷೆ ಒಳಪಡಿಸಿ ಪರಿಹಾರ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲಾಗಿದೆ, ಬೆಳೆ ಹಾನಿಗೊಳಗಾದ ರೈತರ ಖಾತೆ ಡಿ.ಬಿ.ಟಿ ಮುಖಾಂತರ ಹಣ ಪಾವತಿ ಮಾಡಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಮಾತನಾಡಿ, ಜಿಲ್ಲೆಯ ಮಹಿಳೆಯರ ಅಭಿವೃದ್ಧಿಗಾಗಿ ಮೀನುಗಾರಿಕೆ ಇಲಾಖೆಯಿಂದ “ಅಕ್ಕನ ಮನೆ ಊಟ” ಎಂಬ ಮೀನು ಖಾದ್ಯ ತಯಾರಿಸುವ 24 ತ್ರಿಚಕ್ರ ವಾಹನದ ಅಂಗಡಿಗಳನ್ನು ತೆರೆಯಲಾಗಿದೆ, ಆಸಕ್ತ ಮಹಿಳಾ ಸ್ವಸಹಾಯ ಗುಂಪುಗಳ ಮಹಿಳೆಯರು ಇದನ್ನು ನಡೆಸುತ್ತಾರೆ, ಮಹಿಳೆಯರಿಗೆ ತಾಜಾ ಮೀನುಗಳನ್ನು ಪೂರೈಸಲು 49 ಕೆರೆಗಳನ್ನು ಮಹಿಳಾ ಸ್ವಸಹಾಯ ಗುಂಪುಗಳಿಗೆ ಗುತ್ತಿಗೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಕೆ.ಅರ್ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು, ಪರಿಷತ್ತ್ ಸದಸ್ಯ ವಿವೇಕಾನಂದ, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

5 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago