ಮಂಡ್ಯ : ವಿಷಪೂರಿತ ಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಚಿಕಿತ್ಸೆ ಫಲಕಾರಿ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಸಿದ್ದಪ್ಪ (65) ಮೃತ ವ್ಯಕ್ತಿ. ಮೂರು ದಿನಗಳ ಹಿಂದೆ ಜಮೀನಿನ ಬಳಿ ಕೆಲಸ ಮಾಡುವ ಸಂದರ್ಭದಲ್ಲಿ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ಇವರ ಗಮನಕ್ಕೆ ಬಂದಿಲ್ಲ. ಮರುದಿನ ಬೆಳಗ್ಗೆ ನೋಡಿದಾಗ ಕಾಲು ತೀವ್ರವಾಗಿ ಹೂತಿಕೊಂಡಿದ್ದ ಪರಿಣಾಮ ಮಂಡ್ಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಸರ್ಕಾರದಿಂದ ಸೂಕ್ತ ಪರಿಹಾರ ಕೊಡುವಂತೆ ಕುಟುಂಬ ವರ್ಗದವರು ಮನವಿ ಮಾಡಿದ್ದಾರೆ.
ಗ್ರಾಮದ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ಸೋಮವಾರ ಸಂಜೆ ನಡೆಯಿತು. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…