Mysore
16
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮಂಡ್ಯ | ಐಪಿಎಲ್‌ ಬೆಟ್ಟಿಂಗ್‌, ಆನ್‌ಲೈನ್‌ ಗೇಮ್‌ ನಿಷೇಧಕ್ಕೆ ರೈತ ಸಂಘ ಒತ್ತಾಯ

ಮಂಡ್ಯ: ಐಪಿಎಲ್ ಬೆಟ್ಟಿಂಗ್, ಆನ್‌ಲೈನ್ ಗೇಮ್ ನಿಷೇಧಕ್ಕೆ ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ ಏಕೀಕರಣ ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆ ನಡೆಸಿ, ಇಸ್ಪೀಟ್ ಆಡುವ ಮೂಲಕ ಅಣಕು ಪ್ರದರ್ಶನ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆಲ್ಲ ಯುಗಾದಿ ಹಬ್ಬದ ಅಂಗವಾಗಿ ನಡೆಯುತ್ತಿದ್ದ ಇಸ್ಪೀಟ್ ಆಟವನ್ನು ನಿಷೇಧಿಸಲಾಗಿದೆ. ಅಂತೆಯೇ ಸಾರ್ವಜನಿಕ ಪ್ರದೇಶದಲ್ಲಿ ಇಸ್ಪೀಟ್ ಆಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಈ ಕ್ರಮ ಸ್ವಾಗತಾರ್ಹ. ಇಂತಹ ನಿಷೇಧ ಕ್ರಮದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ. ಆದರೆ, ಇದೇ ರೀತಿಯ ದಿಟ್ಟ ಕ್ರಮವನ್ನು ಆನ್‌ಲೈನ್ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್ ಹಾಗೂ ಗೇಮ್ ಆಪ್‌ಗಳ ಮೇಲೆ ಏಕೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.

ಐಪಿಎಲ್ ಬೆಟ್ಟಿಂಗ್, ಆನ್‌ಲೈನ್ ಜೂಜಾಟದಿಂದ ಯುವ ಸಮೂಹ ಹಾಳಾಗುತ್ತಿದೆ. ಹೀಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ಆನ್‌ಲೈನ್ ಬೆಟ್ಟಿಂಗ್‌ಗೆ ಸರ್ಕಾರವೇ ಪ್ರೋತ್ಸಾಹ ನೀಡುತ್ತಿರುವುದು ದುರಂತ. ಕೂಡಲೇ ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸಬೇಕೆಂದು ಆಗ್ರಹಿಸಿದರು.

ಸಮಿತಿಯ ಇಂಡುವಾಳು ಚಂದ್ರಶೇಖರ್, ಶಂಭೂನಹಳ್ಳಿ ಸುರೇಶ್, ಸೊ.ಶಿ.ಪ್ರಕಾಶ್, ಚಂದ್ರು, ಕರವೇ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

Tags:
error: Content is protected !!