ಮಂಡ್ಯ: ಪಾಂಡವಪುರ ತಾಲೂಕಿನ ಆರೋಗ್ಯಾಧಿಕಾರಿಗಳ ಕಚೇರಿ ಹಿಂಬದಿಯ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದಿದ್ದ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು. 11 ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ಸಿಂಗೇಗೌಡರ ಮಗ ಉಮೇಶ್ ಬಂಧಿತ ಆರೋಪಿ. ಇದೇ
ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಅಭಿಲಾಷ್ ಎಂಬಾತನ ಸೋದರ ಮಾವನಾಗಿರುವ ಈತ ಭ್ರೂಣ ಹತ್ಯೆಗೆ ಒಳಗಾಗುವವನ್ನು ಗುರುತಿಸಿ, ಅಬಾಷನ್ ಮಾಡಿಸುವ ಮಹಿಳೆಯರನ್ನು ಕರೆತರುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಶೃತಿ ಮತ್ತು ಆಶಾ ಅವರಿಗೆ ಮಹಿಳೆಯರನ್ನು ಪರಿಚಯಿಸಿ, ಅಬಾಷನ್‌ಕ್ಕೆ ಒಳಪಡಿಸುತ್ತಿದ್ದರು ಎನ್ನಲಾಗಿದೆ.
ಇತ್ತೀಚೆಗೆ ದೇವೇಗೌಡನಕೊಪ್ಪಲು ಗ್ರಾಮದ ಮಹಿಳೆಯೊಬ್ಬರಿಗೆ ತಮ್ಮ ಮನೆಯ ಕೊಠಡಿಯಲ್ಲಿ ಭ್ರೂಣ ಹತ್ಯೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದು,ಪ್ರಕರಣದ ಜಾಡು ಹಿಡಿದು ತನಿಖೆ ನಡೆಸುತ್ತಿದ್ದ ಸಬ್‌ಇನ್ಸ್ಪೆಕ್ಟರ್ ಆರ್.ಬಿ.ಉಮೇಶ್ ಅವರ ತಂಡ ಆರೋಪಿಯನ್ನು ಅವರ ಸ್ವತಃ ಮನೆಯಲ್ಲೇ ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿ ಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.