Mysore
22
overcast clouds
Light
Dark

ಮಂಡ್ಯ: ಭ್ರೂಣಹತ್ಯೆ ಪ್ರಕರಣ ತನಿಖೆಗೆ ಡಿವೈಎಸ್‌ಪಿ ನೇತೃತ್ವದ 3 ತಂಡ ರಚನೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಆಸ್ಪತ್ರೆಯ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ, ಈ ಪ್ರಕರಣದ ತನಿಖೆಗೆ ಡಿವೈಎಸ್‌ಪಿ ಮುರುಳಿ ನೇತೃತ್ವದ ಮೂರು ತಂಡಗಳನ್ನು ರಚನೆ ಮಾಡಲಾಗಿದೆ.

ಕೃತ್ಯದಲ್ಲಿ ಭಾಗಿಯಾದ ಅಶ್ವಿನಿ, ಆನಂದ್‌ ಶಶಿಕಲಾ ಹಾಗೂ ಗಿರಿಜಾಂಬಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿತರ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೃತ್ಯ ನಡೆಸಿರುವ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ, ಕೃತ್ಯಕ್ಕೆ ಬಳಸಲಾದ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.