ಮಂಡ್ಯ

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ ವಿತರಿಸುವುದು ಪ್ರಮುಖ ವಂಶವಾಗಿರುತ್ತದೆ.

ಮಂಡ್ಯ ಜಿಲ್ಲೆಯಲ್ಲಿ ವಿವಿಧ ಹಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಗಳಿಗೆ ಬೇಕಾಗುವ ಅವಶ್ಯಕ ಪೋಷಕಾಂಶಗಳ ಆಧಾರದನ್ವಯ ಬೇಡಿಕೆ ಅನುಸಾರವಾಗಿ ಒಟ್ಟಾರೆ ರಸಗೊಬ್ಬರಗಳ ಸರಬರಾಜಿಗೆ ಕ್ರಮ ವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ವಿವಿಧ ರಸಗೊಬ್ಬರಗಳು ಕಡಿಮೆ ಬೆಲೆಗೆ ರೈತರಿಗೆ ದೊರೆಯುವಂತೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ರೈತರಿಗೆ ಪೂರೈಕೆ ಮಾಡುತ್ತಿದೆ. ಸದರಿ ಸಹಾಯಧನದ ರಸಗೊಬ್ಬರಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ಮತ್ತು ರೈತರು ಸಹ ಮಿತವ್ಯಯದಿಂದ ಅವಶ್ಯಕತೆ ಅನುಗುಣವಾಗಿ ರಸಗೊಬ್ಬರವನ್ನು ಬಳಸಲು ಇಲಾಖೆಯು ಕಡ್ಡಾಯವಾಗಿ ಎಫ್‌ಐಡಿ ಸಂಖ್ಯೆಯನ್ನು ರೈತರು ಹೊಂದಿರುವುದು ಕಡ್ಡಾಯ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

8 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

8 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

8 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

8 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

8 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

8 hours ago