ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ ವಿತರಿಸುವುದು ಪ್ರಮುಖ ವಂಶವಾಗಿರುತ್ತದೆ.
ಮಂಡ್ಯ ಜಿಲ್ಲೆಯಲ್ಲಿ ವಿವಿಧ ಹಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಗಳಿಗೆ ಬೇಕಾಗುವ ಅವಶ್ಯಕ ಪೋಷಕಾಂಶಗಳ ಆಧಾರದನ್ವಯ ಬೇಡಿಕೆ ಅನುಸಾರವಾಗಿ ಒಟ್ಟಾರೆ ರಸಗೊಬ್ಬರಗಳ ಸರಬರಾಜಿಗೆ ಕ್ರಮ ವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ವಿವಿಧ ರಸಗೊಬ್ಬರಗಳು ಕಡಿಮೆ ಬೆಲೆಗೆ ರೈತರಿಗೆ ದೊರೆಯುವಂತೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ರೈತರಿಗೆ ಪೂರೈಕೆ ಮಾಡುತ್ತಿದೆ. ಸದರಿ ಸಹಾಯಧನದ ರಸಗೊಬ್ಬರಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ಮತ್ತು ರೈತರು ಸಹ ಮಿತವ್ಯಯದಿಂದ ಅವಶ್ಯಕತೆ ಅನುಗುಣವಾಗಿ ರಸಗೊಬ್ಬರವನ್ನು ಬಳಸಲು ಇಲಾಖೆಯು ಕಡ್ಡಾಯವಾಗಿ ಎಫ್‌ಐಡಿ ಸಂಖ್ಯೆಯನ್ನು ರೈತರು ಹೊಂದಿರುವುದು ಕಡ್ಡಾಯ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…