ಮೋಹನ್ ಕುಮಾರ್ ಬಿ.ಟಿ
ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಕಳೆದ ಕೆಲ ದಿನಗಳ ಹಿಂದೆ ಯುವಕನಿಗೆ ಹಲ್ಲೆ ಮಾಡುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಹಲ್ಲೆಗೊಳಗಾದ ಯುವಕ ಮೈಸೂರಿನ ಟಿ.ನರಸೀಪುರದ ಯಶ್ವಂತ್ ಎಂಬುದು ಪತ್ತೆಯಾಗಿತ್ತು. ಆತನಿಂದ ದೂರು ತೆಗೆದುಕೊಂಡು ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
ದೂರು ಕೊಡುವ ಸಂದರ್ಭದಲ್ಲಿ ಹಲ್ಲೆ ಮಾಡಿದ ನಾಲ್ವರ ಹೆಸರನ್ನು ಆತ ಹೇಳಿದ್ದನು. ಈ ಪ್ರಕರಣ ಸಂಬಂಧ ಮಂಡ್ಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಮೂರು ಪ್ರತ್ಯೇಕ ತಂಡವನ್ನು ರಚಿಸಲಾಗಿತ್ತು. ನಿನ್ನೆ ಸಂಜೆ ಮಂಡ್ಯ ತಾಲ್ಲೂಕಿನ ಬಿ.ಹೊಸೂರು ಬಳಿ ಆರೋಪಿಗಳು ಅಡಗಿರುವ ಮಾಹಿತಿ ಲಭ್ಯವಾಗಿತ್ತು. ಈ ವೇಳೆ ಅಲ್ಲಿ ದಾಳಿ ಮಾಡಿದ ಪೊಲೀಸರು ನಾಲ್ಕು ಮಂದಿಯನ್ನ ವಶಕ್ಕೆ ಪಡೆದಿದ್ದರು. ಈ ವೇಳೆ ಸುಭಾಷ್ ಎಂಬಾತ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಇಂದು ಬೆಳಿಗ್ಗೆ ಮತ್ತೆ ಅದೇ ಜಾಗದಲ್ಲಿ ಶೋಧ ಮಾಡಲಾಗುತ್ತಿತ್ತು. ಈ ವೇಳೆ ಸುಭಾಷ್ ಅಲ್ಲೇ ಇದ್ದದ್ದು ಕಂಡು ಬಂದಿತ್ತು. ಬಂಧಿಸುವಾಗ ಆತ ಪಿಎಸ್ಐ ಶೇಷಾದ್ರಿಗೆ ಕಲ್ಲಿನಿಂದ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಏರ್ ಫೈರಿಂಗ್ ಮಾಡಿ ಸೂಚನೆ ನೀಡಿದ್ರೂ ಕೇಳಲಿಲ್ಲ. ಹೀಗಾಗಿ ಆತನ ಬಲಗಾಲಿಗೆ ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆತ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಾಹಿತಿ ನೀಡಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…