ಮಂಡ್ಯ

ಆರೋಪಿ ಕಾಲಿಗೆ ಫೈರಿಂಗ್ ಪ್ರಕರಣ: ಮಂಡ್ಯದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ

ಮೋಹನ್‌ ಕುಮಾರ್‌ ಬಿ.ಟಿ 

ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಕಳೆದ ಕೆಲ ದಿನಗಳ ಹಿಂದೆ ಯುವಕನಿಗೆ ಹಲ್ಲೆ ಮಾಡುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್‌ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಹಲ್ಲೆಗೊಳಗಾದ ಯುವಕ ಮೈಸೂರಿನ ಟಿ.ನರಸೀಪುರದ ಯಶ್ವಂತ್ ಎಂಬುದು ಪತ್ತೆಯಾಗಿತ್ತು. ಆತನಿಂದ ದೂರು ತೆಗೆದುಕೊಂಡು ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
ದೂರು ‌ಕೊಡುವ‌ ಸಂದರ್ಭದಲ್ಲಿ ಹಲ್ಲೆ ಮಾಡಿದ ನಾಲ್ವರ ಹೆಸರನ್ನು ಆತ ಹೇಳಿದ್ದನು. ಈ ಪ್ರಕರಣ ಸಂಬಂಧ ಮಂಡ್ಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಮೂರು ಪ್ರತ್ಯೇಕ ತಂಡವನ್ನು ರಚಿಸಲಾಗಿತ್ತು‌. ನಿನ್ನೆ ಸಂಜೆ ಮಂಡ್ಯ ತಾಲ್ಲೂಕಿನ ಬಿ.ಹೊಸೂರು ಬಳಿ ಆರೋಪಿಗಳು ಅಡಗಿರುವ ಮಾಹಿತಿ ಲಭ್ಯವಾಗಿತ್ತು‌. ಈ ವೇಳೆ ಅಲ್ಲಿ ದಾಳಿ ಮಾಡಿದ ಪೊಲೀಸರು ನಾಲ್ಕು ಮಂದಿಯನ್ನ ವಶಕ್ಕೆ ಪಡೆದಿದ್ದರು. ಈ ವೇಳೆ ಸುಭಾಷ್ ಎಂಬಾತ ಅಲ್ಲಿಂದ ‌ತಪ್ಪಿಸಿಕೊಂಡು ಪರಾರಿಯಾಗಿದ್ದ. ಇಂದು ಬೆಳಿಗ್ಗೆ ಮತ್ತೆ ಅದೇ ಜಾಗದಲ್ಲಿ ‌ಶೋಧ ಮಾಡಲಾಗುತ್ತಿತ್ತು. ಈ ವೇಳೆ ಸುಭಾಷ್ ಅಲ್ಲೇ ಇದ್ದದ್ದು‌ ಕಂಡು ಬಂದಿತ್ತು. ಬಂಧಿಸುವಾಗ ಆತ ಪಿಎಸ್ಐ ಶೇಷಾದ್ರಿಗೆ ಕಲ್ಲಿನಿಂದ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಏರ್ ಫೈರಿಂಗ್ ಮಾಡಿ ಸೂಚನೆ ನೀಡಿದ್ರೂ ಕೇಳಲಿಲ್ಲ. ಹೀಗಾಗಿ ಆತನ ಬಲಗಾಲಿಗೆ ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆತ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಾಹಿತಿ ನೀಡಿದರು.

 

ಆಂದೋಲನ ಡೆಸ್ಕ್

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

46 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago