ಮಂಡ್ಯ: ಕ್ಲುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಸ್ನೇಹಿತರ ದಿನದಂದೇ ನಡೆದಿದೆ.
ಕೀಲಾರ ಗ್ರಾಮದ ಜಯಂತ್(23) ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ಕೀಲಾರ ಗ್ರಾಮದ ವರ್ಕ್ಶಾಪ್ ಬಳಿ ಮಾತಿಗೆ ಮಾತು ಬಳೆಸಿದ ಗೆಳಯರ ( ಜಯಂತ್ ಮತ್ತು ಕೀರ್ತಿ) ಜಗಳ ತಾರಕಕ್ಕೇರಿದೆ. ಇದರಿಂದ ರೊಚ್ಚಿಗೆದ್ದ ಕೀರ್ತಿ ಎಂಬಾತ ಜಯಂತ್‌ಗೆ ಚಾಕುವಿನಿಂದ ಇರಿದಿದ್ದಾನೆ, ಕೂಡಲೇ ಆರೋಪಿ ಕೀರ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.
ರಕ್ತದ ಮಡುವಿಲ್ಲಿ ನರಳಾಡುತ್ತಿದ್ದ ಜಯಂತ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ, ಆದರೆ ಜಯಂತ್ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ಈ ಸಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…