ಮಂಡ್ಯ

ಮಂಡ್ಯ:ಗ್ರಾ.ಪಂ ಉಪ ಚುನಾವಣೆ, ವೇಳಾಪಟ್ಟಿ ಪ್ರಕಟ

ಮಂಡ್ಯ:ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಭರ್ತಿಮಾಡಲು ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿಯ ಚುನಾವಣೆ ನಡೆಯುವ ವೇಳಾಪಟ್ಟಿ

ನವೆಂಬರ್ 6 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ನಾಮಪ ತ್ರ ಸಲ್ಲಿಸಲು ನವೆಂಬರ್ 12 ಕೊನೆಯ ದಿನಾಂಕವಾಗಿರುತ್ತದೆ. ನವೆಂಬರ್ 13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನವೆಂಬರ್ 15 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ.

ಮತದಾನದ ಅವಶ್ಯವಿದ್ದರೆ ನವೆಂಬರ್ 23 ರಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಮತದಾನ ನಡೆಸಲಾಗುವುದು. ಮತ ಎಣಿಕೆ ನವೆಂಬರ್ 26 ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ಉಪ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ಹಾಗೂ ಕ್ಷೇತ್ರದ ಸಂಖ್ಯೆಯ ವಿವರ ಇಂತಿದೆ

ಮಂಡ್ಯ ತಾಲ್ಲೂಕಿನ ಕೆರಗೋಡು-3, 5-ಕೀಲಾರ-5, 1-ಹುಲಿವಾನ-1, 1-ಯಲಿಯೂರು-1, ಮದ್ದೂರು ತಾಲೂಕಿನ 5-ಅಡಗನಹಳ್ಳಿ-1, 5-ಅಡಗನಹಳ್ಳಿ-1, 6-ಅಡಗನಹಳ್ಳಿ-2, 1-ವಳಗೆರೆಹಳ್ಳಿ-1, 3-ವಳಗೆರೆಹಳ್ಳಿ-3, 5-ತೈಲೂರು-1, 5-ತೈಲೂರು-1, 2-ಗೊರವನಹಳ್ಳಿ-2, 3-ಶಿಂಘಟಗೆರೆ, 2-ಕೆ.ಶೆಟ್ಟಿಹಳ್ಳಿ-2, ಮಳವಳ್ಳಿ ತಾಲೂಕಿನಲ್ಲಿ 5-ಅಂಕನಹಳ್ಳಿ, 3-ಹೊಸಹಳ್ಳಿ-3, 5-ರಾಮನಾಥ ಮೋಳೆ, 4-ಬೆಳಕವಾಡಿ-4 ಸ್ಥಾನಗಳಲ್ಲಿ ಚುನಾವಣೆ ನಡೆಯುತ್ತದೆ.

ಪಾಂಡವಪುರ ತಾಲೂಕಿನಲ್ಲಿ 3-ಬೆಳ್ಳಾಳೆ, 2-ವಳಗೆರೆದೇವರಹಳ್ಳಿ, 3-ಹೊಸಹಳ್ಳಿ, 5-ಕುರಹಟ್ಟಿ, 3-ಬಸವನಗುಡಿಕೊಪ್ಪಲು, 6-ಹೊಸಸಾಯಪ್ಪನಹಳ್ಳಿ, ಶ್ರೀರಂಗಪಟ್ಟಣ ತಾಲೂಕಿನಲ್ಲಿ 04-ಬೆಳಗೊಳ-4, 2-ಗಾಮನಹಳ್ಳಿ, 4-ನೀಲನಕೊಪ್ಪಲು, 06-ಮರಳಗಾಲ, ನಾಗಮಂಗಲ ತಾಲೂಕಿನಲ್ಲಿ 5-ಹೊನ್ನೇನಹಳ್ಳಿ, 4-ಶಿಖರನಹಳ್ಳಿ, 8-ಅಲ್ಪಹಳ್ಳಿ, ಕೆ.ಆರ್ ಪೇಟೆ ತಾಲ್ಲೂಕಿನ 07-ಚಿಕ್ಕೋನಹಳ್ಳಿ, 05-ಕಾಮನಹಳ್ಳಿ, 10-ಪೂವನಹಳ್ಳಿ, 02-ಪುರ ಜಿಲ್ಲೆಯಲ್ಲಿ ಒಟ್ಟು 35 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಚುನಾವಣೆ ನಡೆಸಲು 30 ಚುನಾವಣಾಧಿಕಾರಿಗಳು ಹಾಗೂ 30 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ನೀತಿ ಸಂಹಿತೆ ಜಾರಿ

ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 6 ರಿಂದ 26 ವರೆಗೆ ಜಾರಿಯಲ್ಲಿರುತ್ತದೆ. ಗ್ರಾಮ ಪಂಚಾಯಿತಿಯ ಎಲ್ಲಾ ಸ್ಥಾನಗಳಿಗೆ ಚುನಾವಣೆ ನಡೆಯದ ಸಂದರ್ಭದಲ್ಲಿ ಅಥವಾ ಅವಿರೋಧ ಆಯ್ಕೆಯಾಗಿ ಚುನಾವಣಾಧಿಕಾರಿಗಳು ಫಲಿತಾಂಶ ಘೋಷಿಸಿದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ನಿಂತುಹೋಗುತ್ತದೆ.

ನೀತಿ ಸಂಹಿತೆಯು ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ.

ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷ ರಹಿತ ಚುನಾವಣೆಯಾಗಿದೆ. ಗ್ರಾಮ ಪಂಚಾಯಿತಿ ಉಪ ಚುನಾವಣೆಯು ಮತಪತ್ರಗಳ ಮೂಲಕ ನಡೆಯಲಿದ್ದು, ಮತಪತ್ರದಲ್ಲಿ “NOTA” ಅವಕಾಶವಿರುವುದಿಲ್ಲ.

ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮತದಾನವು ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು ಮತ್ತು ಮದ್ಯ ತಯಾರಿಕ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಸಂದರ್ಭಾನುಸಾರ ಅದರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ  ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

14 mins ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

35 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

3 hours ago